ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ಸುಸೂತ್ರ

ಬಾಗಲಕೋಟೆಯಲ್ಲಿ ಭಾನುವಾರ ನಡೆದ ಪೊಲೀಸ್ ಇಲಾಖೆ ನೇಮಕಾತಿ ಪರೀಕ್ಷೆಗೆ ಆಗಮಿಸಿದ ಪರೀಕ್ಷಾರ್ಥಿಗಳನ್ನು ಸಂಪೂರ್ಣ ತಪಾಸಣೆ ನಡೆಸಿ, ಕೇಂದ್ರದಳೊಗೆ ಕಳುಹಿಸುತ್ತಿರುವುದು.
ಬಾಗಲಕೋಟೆಯಲ್ಲಿ ಭಾನುವಾರ ನಡೆದ ಪೊಲೀಸ್ ಇಲಾಖೆ ನೇಮಕಾತಿ ಪರೀಕ್ಷೆಗೆ ಆಗಮಿಸಿದ ಪರೀಕ್ಷಾರ್ಥಿಗಳನ್ನು ಸಂಪೂರ್ಣ ತಪಾಸಣೆ ನಡೆಸಿ, ಕೇಂದ್ರದಳೊಗೆ ಕಳುಹಿಸುತ್ತಿರುವುದು.
Published on

ಜಿಲ್ಲೆಯ ಬಾಗಲಕೋಟೆ ಹಾಗೂ ಜಮಖಂಡಿ ನಗರದಲ್ಲಿ ಭಾನುವಾರ ನಡೆದ ಪೊಲೀಸ್ ಇಲಾಖೆಯ ನೇಮಕಾತಿ ಲಿಖಿತ ಪರೀಕ್ಷೆ ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಿತು. ಪರೀಕ್ಷಾ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಜಿಲ್ಲಾಽಕಾರಿ ಸಂಗಪ್ಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಗಲಕೋಟೆ ನಗರದ ಬಿವಿವಿ ಸಂಘದ ಆವರಣದಲ್ಲಿರುವ ೪ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಽಕಾರಿ ಸಂಗಪ್ಪ ಅವರು ಬಳಿಕ ಜಮಖಂಡಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ಕೊಠಡಿಗಳ ವ್ಯವಸ್ಥೆ, ಅಭ್ಯರ್ಥಿಗಳಿಗೆ ಕಲ್ಪಿಸಲಾದ ಮೂಲಭೂತ ಸೌಕರ್ಯ, ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ ಹಾಗೂ ಭದ್ರತಾ ಕ್ರಮಗಳ ಬಗ್ಗೆ ಅಽಕಾರಿಗಳಿಂದ ಮಾಹಿತಿ ಪಡೆದರು. ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೇ ಪಾರದರ್ಶಕವಾಗಿ ನಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಽಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಽಕಾರಿ ಜೊತೆ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ಧಾರ್ಥ ಗೋಯಲ್, ಪರೀಕ್ಷಾ ಕೇಂದ್ರಗಳಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಣೆಯನ್ನು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಹಾಗೂ ಭದ್ರತಾ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಯಿತು. ಮೊಬೈಲ್ -ೆÇÃನ್ ಸೇರಿದಂತೆ ನಿಷೇಽತ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯಲು ಅವಕಾಶ ನೀಡಲಿಲ್ಲ. ಪ್ರತಿಯೊಬ್ಬ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ ಬಾಗಲಕೋಟೆ ನಗರದಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳು ಬೆಳ್ಳಂ ಬೆಳಗ್ಗೆಯೇ ಕೇಂದ್ರಗಳಿಗೆ ಆಗಮಿಸಿದ್ದು, ಪ್ರವೇಶ ಪತ್ರ ಹಾಗೂ ಗುರುತಿನ ಚೀಟಿ ಪರಿಶೀಲನೆಯ ಬಳಿಕ ಕೇಂದ್ರಗಳಿಗೆ ಪ್ರವೇಶ ಕಲ್ಪಿಸಲಾಯಿತು. ಪರೀಕ್ಷೆಗೆ ನಿಷೇಽಸಿದ ವಸ್ತುಗಳನ್ನು ಭದ್ರತಾ ಸಿಬ್ಬಂದಿ ತಪಾಸಣೆಗೆ ಒಳಪಡಿಸಲಾಯಿತು. ಇದರ ಜೊತೆಗೆ ಅಭ್ಯರ್ಥಿಗಳ ಪ್ರಿಸ್ಕಿಂಗ್ ಕಾರ್ಯ ನಡೆಸಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಗೊಂದಲ ಅಥವಾ ಅಹಿತಕರ ಘಟನೆಗಳು ವರದಿಯಾಗದೇ ಪರೀಕ್ಷೆ ನಿಗದಿತ ವೇಳಾ ಪಟ್ಟಿಯಂತೆ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net