

ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ಸೆಪ್ಟೆಂಬರ್ ೫ರಿಂದ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಽಕಾರಿ ಸಂಗಪ್ಪ ಹೇಳಿದ್ದಾರೆ.