ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ಶೌಚ ಗೃಹ, ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು. ಪರೀಕ್ಷಾರ್ಥಿಗಳು ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು, ಪ್ರಶ್ನೆ ಪತ್ರಿಕೆಗಳ ಸುರಕ್ಷತೆ ಸಾಗಣೆ, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಪೊಲೀಸ್ ಬಂದೋಬಸ್ತ್ ಹಾಗೂ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.