ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಮೊದಲು ಪ್ರವಾಸಿ ತಾಣಗಳ ಅಭಿವೃದ್ಧಿಯ ದೃಷ್ಟಿಕೋನ ಇಟ್ಟುಕೊಂಡು ಯೋಜನಾ ವರದಿ ಸಿದ್ಧಪಡಿಸಬೇಕು. ಪ್ರವಾಸಿ ತಾಣಗಳ ಪ್ರಸ್ತುತ ವಸ್ತುಸ್ಥಿತಿ, ಪಾರಂಪರಿಕ ತಾಣಗಳ ಸಂರಕ್ಷಣೆ, ಸ್ಥಳೀಯ ಉದ್ಯೋಗ ಸೃಷ್ಟಿ, ಮೂಲ ಸೌಕರ್ಯ ಸುಧಾರಣೆ, ರಸ್ತೆ ಸಂಪರ್ಕ, ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು ಹಾಗೂ ವಸತಿ ಸೇರಿ ಅಗತ್ಯ ಮೂಲ ಸೌಕರ್ಯಗಳ ಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದರು.