ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ, ಲೋಕೋಪಯೋಗಿ ಇಲಾಖೆ, ಅರಣ್ಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಶಿಶು ಅಭಿವೃದ್ಧಿ ಯೋಜನೆ, ಸಹಕಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೇರಿ ಇತರೆ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿದರು. ಸಭೆಗೆ ಗೈರು ಹಾಜರಾದ ಹೆಸ್ಕಾಂ ಅಧಿಕಾರಿಗೆ ನೋಟಿಸ್ ನೀಡಲು ತಿಳಿಸಿದರು. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಅಭಿವೃದ್ಧಿ ಕೆಲಸಗಳಿಗೆ ನನ್ನ ಸಹಕಾರ ಯಾವಾಗಲೂ ಇರುತ್ತದೆ. ಕೆಲಸದಲ್ಲಿ ಆಸಕ್ತಿ ಇಲ್ಲದವರು ವರ್ಗಾವಣೆ ಮಾಡಿಕೊಂಡು ಬೇರೆಡೆ ಹೋಗುವಂತೆ ಎಚ್ಚರಿಕೆ ನೀಡಿದರು.