ಅವಾರ್ಡ ಆಗಿರುವ ಹಾಗೂ ಅವಾರ್ಡ ಸ್ಟೇಜನಲ್ಲಿರುವ ಜಮೀನುಗಳ ಸರ್ವೆ ಕಾರ್ಯ ಕೈಗೊಂಡು ಪರಿಹಾರ ಹಂಚಿಕೆ ಮಾಡಲು ಎಲ್ಲ ರೀತಿಯಿಂದ ಮಾಹಿತಿ ಸಜ್ಜಾಗಿರಬೇಕು. ಇದಕ್ಕಾಗಿ ಅಽಕಾರಿ ಹಾಗೂ ಸಿಬ್ಬಂದಿಗಳು ಜವಾಬ್ದಾರಿಯಿಂದ ಕೆಲಸ ಮಾಡಲು ಸೂಚನೆ ನೀಡಿದ ಅವರು, ಆದ್ಯತೆ ಮೇರೆಗೆ ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಽಕಾರಿಗಳು ಮಾನವೀಯತೆ ದೃಷ್ಠಿಯನ್ನು ಇಟ್ಟುಕೊಂಡು ಹಾಗೂ ನೋಂದ ಸಂತ್ರಸ್ತರಿಗೆ ಧ್ವನಿಯಾಗುವ ರೀತಿಯಲ್ಲಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸೂಕ್ತ ಪರಿಹಾರ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು.