ಪ್ರಧಾನಿ ಮೋದಿ ದೇಶದ ಶ್ರೇಷ್ಠ ನಾಯಕ

ಬಾಗಲಕೋಟೆ ನಗರದ ಹೊಳೆ ಆಂಜನೇಯ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸೇವಾ ಜ್ಯೋತಿ ಯಾತ್ರೆಗೆ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಚಾಲನೆ ನೀಡಿದರು. ಸಂಸದ ಪಿ.ಸಿ.ಗದ್ದಿಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ರಾಜಶೇಖರ ಶೀಲವಂತರ, ಮುಖಂಡ ವಿದ್ಯಾಧರ ಸವದಿ, ಮೋಹನ ಜಾಧವ, ಶಿವಾನಂದ ಸುರಪುರ ಇತರರಿದ್ದರು.
ಬಾಗಲಕೋಟೆ ನಗರದ ಹೊಳೆ ಆಂಜನೇಯ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸೇವಾ ಜ್ಯೋತಿ ಯಾತ್ರೆಗೆ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಚಾಲನೆ ನೀಡಿದರು. ಸಂಸದ ಪಿ.ಸಿ.ಗದ್ದಿಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ರಾಜಶೇಖರ ಶೀಲವಂತರ, ಮುಖಂಡ ವಿದ್ಯಾಧರ ಸವದಿ, ಮೋಹನ ಜಾಧವ, ಶಿವಾನಂದ ಸುರಪುರ ಇತರರಿದ್ದರು.ಬಾಗಲಕೋಟೆ ನಗರದ ಹೊಳೆ ಆಂಜನೇಯ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸೇವಾ ಜ್ಯೋತಿ ಯಾತ್ರೆಗೆ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಚಾಲನೆ ನೀಡಿದರು. ಸಂಸದ ಪಿ.ಸಿ.ಗದ್ದಿಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ರಾಜಶೇಖರ ಶೀಲವಂತರ, ಮುಖಂಡ ವಿದ್ಯಾಧರ ಸವದಿ, ಮೋಹನ ಜಾಧವ, ಶಿವಾನಂದ ಸುರಪುರ ಇತರರಿದ್ದರು.
Published on: 

ವಿಜಯವಾಣಿ ಸುದ್ದಿಜಾಲ ಬಾಗಲಕೋಟೆ

ಪ್ರಧಾನಿ ನರೇಂದ್ರ ಮೋದಿ ಭಾರತದ ಶ್ರೇಷ್ಠ ನಾಯಕ. ಅವರು ವಿಶ್ವ ನಾಯಕ ಆಗಬೇಕು ಎಂದು ಜನರು ಹಂಬಲಿಸುತ್ತಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಬಣ್ಣಿಸಿದರು.

ನಗರದ ಹೊಳೆಆಂಜನೇಯ ದೇವಸ್ಥಾನದ ಬಳಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ಸೇವೆಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಸೇವಾ ಜ್ಯೋತಿಯಾತ್ರೆ ಜ್ಯೋತಿಯಾತ್ರೆ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಪ್ರತಿಯೊಂದು ರಾಷ್ಟçದವರು ಸಹ ನರೇಂದ್ರ ಮೋದಿ ಅವರುನ್ನು ತಮ್ಮ ದೇಶಕ್ಕೆ ಬರಬೇಕು ಎಂದು ಹಂಬಲಿಸುತ್ತಿದ್ದಾರೆ. ಮೋದಿ ಅವರಿಗೆ ರತ್ನಗಂಬಳಿ ಹಾಕಿ ಕರೆಯುತ್ತಿದ್ದಾರೆ. ಇವತ್ತು ಇಡೀ ಪ್ರಪಂಚವೇ ಭಾರತದ ಕಡೆಗೆ ನೋಡುವ ಹಾಗೆ 12 ವರ್ಷಗಳ ಕಾಲ ಆಡಳಿತವನ್ನು ಮೋದಿ ಅವರು ನಡೆಸಿದ್ದಾರೆ ಎಂದರು.

ಪ್ರಪಂಚದ ಶ್ರೀಮಂತ ರಾಷ್ಟçಗಳಲ್ಲಿ 2013ರಲ್ಲಿ ಭಾರತ 13ನೇ ಸ್ಥಾನದಲ್ಲಿ ಇತ್ತು. ಈಗ ಅದು 3ನೇ ಸ್ಥಾನಕ್ಕೆ ಬಂದು ತಲುಪಿದೆ. ಇದರಿಂದ ಮೋದಿ ಅವರ ಬಗ್ಗೆ ದೇಶದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಹೆಚ್ಚಾಗಿದೆ ಎಂದು

ತಿಳಿಸಿದರು.

ಇದಕ್ಕೂ ಮುನ್ನ ಹೊಳೆ ಆಂಜನೇಯ ದೇವಸ್ಥಾನದ ಬಳಿ ಜರುಗಿದ ಸಮಾರಂಭದಲ್ಲಿ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಪ್ರಧಾನಿ ಮೋದಿ ಅವರ ಭಾಷಣದ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಾಷಣದ ನಂತರ ನಾಯಕರ ಸಮ್ಮುಖದಲ್ಲಿ ಕಾರ್ಯಕರ್ತರು 2047ರ ವಿಕಸಿತ ಭಾರತಕ್ಕಾಗಿ ಪ್ರತಿಜ್ಞಾವಿಽ ಸ್ವೀಕರಿಸಿದರು.

ನಂತರ ಜ್ಯೋತಿ ಯಾತ್ರೆಯು ಹೊಳೆ ಆಂಜನೇಯ ದೇವಸ್ಥಾನದಿಂದ ಆರಂಭಗೊAಡು ಹಳೇ ಕಾಯಿಪಲ್ಲೆ ಮಾರುಕಟ್ಟೆ, ಕಿಲ್ಲಾ, ಎಂಜಿ ರಸ್ತೆ ಮೂಲಕ ಆಗಮಿಸಿ ಬಸವೇಶ್ವರ ವೃತ್ತದಲ್ಲಿ

ಮುಕ್ತಾಯಗೊಂಡಿತು.

ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ಸಿದ್ದು ಸವದಿ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ಮಾಜಿ ಶಾಸಕರಾದ ಎಂ.ಕೆ.ಪಟ್ಟಣಶೆಟ್ಟಿ, ದೊಡ್ಡನಗೌಡ ಪಾಟೀಲ, ರಾಜಶೇಖರ ಶೀಲವಂತರ, ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಪ್ರಶಾಂತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನೂರಮಠ, ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ಮುಖಂಡರಾದ ಅಶೋಕ ಲಿಂಬಾವಳಿ, ಬಸವರಾಜ ಯಂಕAಚಿ, ವಿದ್ಯಾಧರ ಸವದಿ, ಮೋಹನ ಜಾಧವ, ಶಿವಾನಂದ ಸುರಪುರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net