ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ

ಧ್ವಜಾರೋಹಣ ನೆರವೇರಿಸಿ ಪರೇಡ್ ವೀಕ್ಷಿಸಿದ ಸಚಿವ ವಿಜಯಾನಂದ ಕಾಶಪ್ಪನವರ.
ಧ್ವಜಾರೋಹಣ ನೆರವೇರಿಸಿ ಪರೇಡ್ ವೀಕ್ಷಿಸಿದ ಸಚಿವ ವಿಜಯಾನಂದ ಕಾಶಪ್ಪನವರ.
Published on

ಸರ್ಕಾರದ ಜನಪರ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರು ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ೮೦ನೇ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಬರ ನಿರ್ವಹಣೆ, ರೈತರ ಹಿತ, ಯುವ ಸಬಲೀಕರಣ ಹಾಗೂ ಕೈಗಾರಿಕೆಗಳ ಉತ್ತೇಜನಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಹಾನಿ ಪರಿಶೀಲಿಸಲಾಗಿದ್ದು, ಪರಿಹಾರ ಒದಗಿಸಲು ಕ್ರಮವಹಿಸಲಾಗುತ್ತಿದೆ. ಈ ಬಾರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ೬೯,೯೧೦ ರೈತರು ನೋಂದಾಯಿಸಿಕೊAಡಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರ ಪ್ರಯಾಣದ ಪ್ರಮಾಣ ಶೇ.೬೫ರಷ್ಟಿದ್ದು, ೨೯,೪೫೯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗಿದೆ. ಗೃಹಲಕ್ಷಿ÷್ಮÃ ಯೋಜನೆಯಡಿ ೩೧ ಕಂತುಗಳಲ್ಲಿ ೨,೪೭೬.೬೮ ಕೋಟಿ ಡಿಬಿಟಿ ಮೂಲಕ ಜಮೆ ಮಾಡಲಾಗಿದೆ ಎಂದರು.
ವಿಬಿಜಿ-ರಾಮ್‌ಜಿ ಯೋಜನೆಯಡಿ ೧೨೫ ದಿನಗಳ ಉದ್ಯೋಗ ಹಾಗೂ ೩೮೨ರೂ.ಗಳ ಕೂಲಿ ನೀಡಲಾಗುತ್ತಿದ್ದು, ೭,೬೫೮ ಕಾಮಗಾರಿಗಳು ಅನುಮೋದನೆಯಾಗಿವೆ. ಜಲಧಾರೆ ಯೋಜನೆಯಡಿ ೧,೬೮೮.೯೫ ಕೋಟಿ ವೆಚ್ಚದ ಐದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪ್ರಗತಿಯಲ್ಲಿವೆ. ಬಾಗಲಕೋಟೆಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಆರೋಗ್ಯ ಕ್ಷೇತ್ರಕ್ಕೆ ಹೊಸ ಶಕ್ತಿ ದೊರೆಯಲಿದೆ. ಜಿಲ್ಲೆಯ ೬೦ ಸರ್ಕಾರಿ ಶಾಲೆಗಳನ್ನು ಉದ್ಯಮಗಳು ಹಾಗೂ ಸಂಘ-ಸAಸ್ಥೆಗಳ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ೨೪ ಗಂಟೆಗಳ ಕಾಲ ಕಾರ್ಯನಿರ್ವಹಿಸುವಂತೆ ಉನ್ನತೀಕರಿಸಲಾಗುತ್ತಿದೆ ಎಂದು ಎಂದು ವಿವರಿಸಿದರು.
ಜಿಲ್ಲೆಯಲ್ಲಿ ೧೭,೩೦೯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿದ್ದು, ೧,೭೯೭.೯೦ ಕೋಟಿ ಬಂಡವಾಳ ಹೂಡಿಕೆಯಾಗಿದೆ. ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ, ಸ್ಥಳೀಯರಿಗೆ ಉದ್ಯೋಗ ಹಾಗೂ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆಗೆ ಆದ್ಯತೆ ನೀಡಲಾಗುವುದು. ಜಲಧಾರೆ ಯೋಜನೆಯಡಿ ೫೯೫ ಗ್ರಾಮಗಳ ೧,೦೦೬ ಜನವಸತಿಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಗಳು ಪ್ರಗತಿಯಲ್ಲಿವೆ ಎಂದರು.
ಶಾಸಕ ಉಮೇಶ ಮೇಟಿ ಅಧ್ಯಕ್ಷತೆ ವಹಿಸಿದ್ದರು. ಸಂಸದ ಪಿ.ಸಿ.ಗದ್ದಿಗೌಡ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಶಾಸಕರಾದ ಪಿ.ಎಚ್.ಪೂಜಾರ, ಹನಮಂತ ನಿರಾಣಿ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅನೀಲಕುಮಾರ ದಡ್ಡಿ, ಜಿಲ್ಲಾಽಕಾರಿ ಸಂಗಪ್ಪ, ಜಿ.ಪಂ ಸಿಇಒ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಽಕಾರಿ ಸ್ವಪ್ನಿಲ್ ಅಹೀರೆ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಉಪ ವಿಭಾಗಾಽಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶೀಲ್ದಾರ ವಾಸುದೇವ ಸ್ವಾಮಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net