200 ಎಕರೆ ಮೆಗಾ ಮಾರುಕಟ್ಟೆ ಭರವಸೆ

ಬಾಗಲಕೋಟೆ ಬಸವೇಶ್ವರ ಬ್ಯಾಂಕ್‌ಗೆ ಭೇಟಿ ನೀಡಿದ್ದ ಸಚಿವ ಎಂ.ಬಿ.ಪಾಟೀಲ ಅವರಿಗೆ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಅವರು ಸನ್ಮಾನಿಸಿದರು. ಶಾಸಕ ಆರ್.ಬಿ. ತಿಮ್ಮಾಪೂರ, ಮಾಜಿ ಸಚಿವ ಎಸ್.ಆರ್. ಪಾಟೀಲ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮತ್ತಿತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಎಂ.ಬಿ.ಪಾಟೀಲ ಹೇಳಿಕೆ
  • ಬಾಗಲಕೋಟೆ ಪ್ರಮುಖ ವ್ಯಾಪಾರ ಕೇಂದ್ರವಾಗಿ ಬೆಳೆಯಲಿದೆ
ಬಾಗಲಕೋಟೆ: ನವನಗರದ 200 ಎಕರೆ ಪ್ರದೇಶದಲ್ಲಿ ಮೆಗಾ ಮಾರುಕಟ್ಟೆ ಮಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.
ನವನಗರದ ಬಸವೇಶ್ವರ ಬ್ಯಾಂಕಿನಲ್ಲಿ ಮಂಗಳವಾರ ಬುಮಾ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಗಲಕೋಟೆ ನಗರ ಹಾಗೂ ಜಿಲ್ಲೆ ಜನರು ಅಭಿವೃದ್ಧಿ ಪರವಾಗಿ ಐತಿಹಾಸಿಕ ಜನಾದೇಶ ನೀಡಿದ್ದಾರೆ. ಅವರ ನಿರ್ಧಾರಕ್ಕೆ ಸರ್ಕಾರವು ಬಾಗಲಕೋಟೆಯ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.
ಪ್ರಾಜೆಕ್ಟ್ ಎಫೆಕ್ಟೆಡ್ ಸಿಟಿ ಎಂಬ ವಿಶೇಷ ಪರಿಕಲ್ಪನೆಯಡಿ ಬಾಗಲಕೋಟೆಯಲ್ಲಿ ವಿಶೇಷ ಕೈಗಾರಿಕಾ ಮತ್ತು ಉದ್ಯಮ ವಲಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯ ಪ್ರವೃತ್ತವಾಗಲಿದೆ. ಇದರಿಂದ ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚುವುದರ ಜೊತೆಗೆ, ಬಾಗಲಕೋಟೆಯು ಉತ್ತರ ಕರ್ನಾಟಕದ ಪ್ರಮುಖ ವ್ಯಾಪಾರ ಮತ್ತು ಕೈಗಾರಿಕಾ ಕೇಂದ್ರವಾಗಿ ಬೆಳೆಯಲಿದೆ ಎಂದು ಅಭಿಪ್ರಾಯಪಟ್ಟರು.
ಶಾಸಕ ಆರ್.ಬಿ. ತಿಮ್ಮಾಪೂರ, ಮಾಜಿ ಸಚಿವ ಎಸ್.ಆರ್. ಪಾಟೀಲ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ನಾಡಗೌಡ, ಬುಮಾ ಅಧ್ಯಕ್ಷ ರವಿ ಕುಮಟಗಿ, ಕಾರ್ಯದರ್ಶಿ ವಿರೂಪಾಕ್ಷ ಅಮೃತಕರ, ಶ್ರೀನಿವಾಸ ಬಳ್ಳಾರಿ, ರಾಮ ಮುಂದಡಾ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net