ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಬನಹಟ್ಟಿಯಲ್ಲಿ ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ತಹಸೀಲ್ದಾರ್ ಗಿರೀಶ ಸ್ವಾದಿ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಮುಖಂಡರಾದ ಮಲ್ಲಪ್ಪ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ದಾನಪ್ಪ ಹುಲಜತ್ತಿ, ರಾಜು ಭದ್ರನ್ನವರ, ಸಂಜು ಜೋತಾವರ, ಯಾಸಿನ್ ಡಾಲಾಯತ್, ಶೇಖರ ಹಕ್ಕಲದಡ್ಡಿ, ಸಂಗಮೇಶ ಮಡಿವಾಳ, ದೇವಲ ದೇಸಾಯಿ ಇತರರಿದ್ದರು.
ಬನಹಟ್ಟಿಯಲ್ಲಿ ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ತಹಸೀಲ್ದಾರ್ ಗಿರೀಶ ಸ್ವಾದಿ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಮುಖಂಡರಾದ ಮಲ್ಲಪ್ಪ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ದಾನಪ್ಪ ಹುಲಜತ್ತಿ, ರಾಜು ಭದ್ರನ್ನವರ, ಸಂಜು ಜೋತಾವರ, ಯಾಸಿನ್ ಡಾಲಾಯತ್, ಶೇಖರ ಹಕ್ಕಲದಡ್ಡಿ, ಸಂಗಮೇಶ ಮಡಿವಾಳ, ದೇವಲ ದೇಸಾಯಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕುಡಚಿ-ಜಮಖಂಡಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ
  • ತಹಸೀಲ್ದಾರ್ ಗಿರೀಶ ಸ್ವಾದಿ ಅವರಿಗೆ ಮನವಿ
  • ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನಿತ್ಯ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ
ರಬಕವಿ/ಬನಹಟ್ಟಿ : ಪಟ್ಟಣದ ಎಂ.ಎಂ. ಬಂಗ್ಲೆ ಎದುರು ತೇರದಾಳ ಕ್ಷೇತ್ರದ ಕಾಂಗ್ರೆಸ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಅಡುಗೆ ಅನಿಲದ ಬೆಲೆ ಏರಿಕೆಯನ್ನು ಖಂಡಿಸಿ, ಕುಡಚಿ-ಜಮಖಂಡಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಹಸೀಲ್ದಾರ್ ಗಿರೀಶ ಸ್ವಾದಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನಿತ್ಯ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು. ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಅಡುಗೆ ಅನಿಲದ ಬೆಲೆ ಏರಿಕೆ ತೀವ್ರ ಹೊರೆ ತಂದಿದೆ ಎಂದು ಹೇಳಿದರು.
ಮಹಿಳಾ ಕಾಂಗ್ರೆಸ್ ಮುಖಂಡೆ ಸವಿತಾ ಕೊಣ್ಣೂರ ಮಾತನಾಡಿ, 2014ರಲ್ಲಿ ಸುಮಾರು 400 ರೂ. ಇದ್ದ ಗ್ಯಾಸ್ ಸಿಲಿಂಡರ್ ಬೆಲೆ ಈಗ ಸಾವಿರ ರೂಪಾಯಿ ದಾಟಿರುವುದು ಜನರ ಮೇಲೆ ಹೆಚ್ಚುವರಿ ಭಾರವಾಗಿದ್ದು, ತಕ್ಷಣವೇ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸುಮಿತ್ರ ಗುಲಬಾಳ ಮಾತನಾಡಿ , ಪೆಟ್ರೋಲ್, ಡೀಸೆಲ್ ಸೇರಿ ಅನೇಕ ಅವಶ್ಯಕ ವಸ್ತುಗಳ ಬೆಲೆ ಏರಿಕೆಯೊಂದಿಗೆ ಸರ್ಕಾರ ಜನರ ಮೇಲಿನ ಆರ್ಥಿಕ ಒತ್ತಡವನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು.
ಪ್ರತಿಭಟನೆ ವೇಳೆ ಕೆಲಕಾಲ ಸಂಚಾರ ಸ್ಥಗಿತಗೊಂಡು ಸಾರ್ವಜನಿಕರಿಗೆ ತೊಂದರೆ ಉಂಟಾಯಿತು. ಕಾಂಗ್ರೆಸ್ ಮುಖಂಡರಾದ ಮಲ್ಲಪ್ಪ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ದಾನಪ್ಪ ಹುಲಜತ್ತಿ, ರಾಜು ಭದ್ರನ್ನವರ, ಸಂಜು ಜೋತಾವರ, ಯಾಸಿನ್ ಡಾಲಾಯತ್, ಶೇಖರ ಹಕ್ಕಲದಡ್ಡಿ, ಸಂಗಮೇಶ ಮಡಿವಾಳ, ದೇವಲ ದೇಸಾಯಿ, ಸುರೇಶ ಪಾಟೀಲ, ಸದಾಶಿವ ಗೊಂದಕರ, ಶಂಕರ ಕೆಸರಗೊಪ್ಪ, ರೇಣುಕಾ ಮಡ್ಡಿಮನಿ, ಜಯಶ್ರೀ ತಿಮ್ಮಾಪೂರ, ವಿದ್ಯಾ ಬಿಳ್ಳೂರ, ಮಹಾನಂದಾ ಅಮರಾಪೂರ, ಆಶಾ ಭೂತಿ, ಆಯೇಶಾ ಣಿಬಂದ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net