ನೀಟ್ ಪರೀಕ್ಷೆ ಸೋರಿಕೆ ಖಂಡಿಸಿ ಪ್ರತಿಭಟನೆ

ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಸಂಸದ ಪಿ.ಸಿ.ಗದ್ದಿಗೌಡರ ಅವರಿಗೆ ಮನವಿ ಸಲ್ಲಿಸಿದರು. ಎಬಿವಿಪಿ ವಿಭಾಗ ಸಂಚಾಲಕ ಪ್ರಥಮೇಶ ವಾಘಮೋಡೆ, ಜಿಲ್ಲಾ ಸಂಚಾಲಕ ವಿಪುಲ್ ಪೇಟಕರ, ರವಿ ದಂಡಗಿ, ಸುಮಾ, ತರುಣ ಇದ್ದರು.

Published on
ಬಾಗಲಕೋಟೆ: ನೀಟ್ ಪರೀಕ್ಷೆ ಸೋರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಕೇಂದ್ರ ಸರ್ಕಾರ ಹಾಗೂ ಸಂಬAಽತ ಅಽಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂಸದ ಪಿ.ಸಿ.ಗದ್ದಿಗೌಡರ ಅವರಿಗೆ ಮನವಿ ಸಲ್ಲಿಸಲಾಯಿತು.
ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ವಿದ್ಯಾರ್ಥಿಗಳು ಹಗಲು-ರಾತ್ರಿ ಕಷ್ಟಪಟ್ಟು ಓದಿರುತ್ತಾರೆ. ಸಾಕಷ್ಟು ಸವಾಲುಗಳ ನಡುವೆ ಪರೀಕ್ಷೆ ಎದುರಿಸಿದ್ದಾರೆ. ನೀಟ್ ಪರೀಕ್ಷೆ ಬರೆದ ಬಳಿಕ ಸೋರಿಕೆ ವಿಷಯ ಹೊರಗೆ ಬಿದ್ದಿದೆ. ಹೀಗೆ ಆದರೇ ಮುಂದಿನ ಭವಿಷ್ಯವೇನು. ಈ ಕೂಡಲೇ ಸರ್ಕಾರ ಸರಿಪಡಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ವಿಭಾಗ ಸಂಚಾಲಕ ಪ್ರಥಮೇಶ ವಾಘಮೋಡೆ, ಜಿಲ್ಲಾ ಸಂಚಾಲಕ ವಿಪುಲ್ ಪೇಟಕರ, ರವಿ ದಂಡಗಿ, ಸುಮಾ, ತರುಣ, ಬಸವರಾಜ್, ಕಾರ್ತಿಕ್, ಪುರುಷೋತ್ತಮ, ಸುದರ್ಶನ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net