ಹುನಗುಂದ ತಾಲೂಕಿನ ಬೇವಿನಮಟ್ಟಿ ಗ್ರಾಮದ ರೈತರ ಜಮೀನಿಗೆ ರಸ್ತೆ ಕಲ್ಪಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಬಸವರಾಜ ಮಸ್ಕಿ ಮಾತನಾಡಿದರು. ಮಲ್ಲಿಕಾರ್ಜುನ ಹೊಸಮನಿ, ರಾಜು ಈಟಿ, ಬಸವರಾಜ ಚಲವಾದಿ, ಸಂಗಪ್ಪ ಚಲವಾದಿ, ಮಂಜುನಾಥ ಬೇವಿನಮಟ್ಟಿ ಇತರರಿದ್ದರು.
ಜಮೀನಿಗೆ ಹೋಗಲು ದಾರಿ ಇಲ್ಲದೆ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಹುನಗುಂದ : ತಾಲೂಕಿನ ಬೇವಿನಮಟ್ಟಿ ಗ್ರಾಮದ ರಿ.ಸಂ. ನಂ. 29/ಎಕ್ಕೆ ಸೇರಿದ ಬಸವರಾಜ ಚಲವಾದಿ ಅವರ ಜಮೀನಿಗೆ ರಸ್ತೆ ಕಲ್ಪಿಸುವಂತೆ ಆಗ್ರಹಿಸಿ ಮಂಗಳವಾರ ತಹಸೀಲ್ದಾರ್ ಕಚೇರಿ ಎದುರು ರೈತರು ಹಾಗೂ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ದಲಿತ ಮುಖಂಡ ಬಸವರಾಜ ಮಸ್ಕಿ ಮಾತನಾಡಿ, ಜಮೀನಿಗೆ ಹೋಗಲು ದಾರಿ ಇಲ್ಲದೆ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ. ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.
ಮುಖ್ಯಂಡ ಮಲ್ಲಿಕಾರ್ಜುನ ಹೊಸಮನಿ ಮಾತನಾಡಿ, ಇದು ಕೇವಲ ಒಂದು ಗ್ರಾಮದ ಸಮಸ್ಯೆಯಲ್ಲ. ತಾಲೂಕಿನ ಅನೇಕ ರೈತರು ಇದೇ ಸಂಕಷ್ಟ ಎದುರಿಸುತ್ತಿದ್ದಾರೆ. ಜಮೀನಿಗೆ ರಸ್ತೆ ಇಲ್ಲದ ಕಾರಣ ಕಷಿ ಚಟುವಟಿಕೆಗಳಿಗೆ ಅಡಚಣೆ ಉಂಟಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.