ಸಾರ್ವಜನಿಕರಿಗೆ ಗುಣಮಟ್ಟದ ಸೌಲಭ್ಯ ಒದಗಿಸಿ

 ಮುಧೋಳದ ವೆಂಕಟೇಶ ಮಹಾರಾಜಾ ಕೆರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಓಪನ್ ಜಿಮ್ ಕಾಮಗಾರಿ ಸ್ಥಳಕ್ಕೆ ಶಾಸಕ ಆರ್.ಬಿ. ತಿಮ್ಮಾಪೂರ ಹಾಗೂ ಮುಖಂಡರಾದ ಅಶೋಕ ಕಿವಡಿ, ಸದುಗೌಡ ಪಾಟೀಲ್, ಸಂಗಪ್ಪ ಇಮ್ಮನವರ, ರಾಜುಗೌಡ ಪಾಟೀಲ್, ಮುದಕಣ್ಣ ಅಂಬಿಗೇರ ನೀಡಿ ಪರಿಶೀಲಿಸಿದರು.

Published on
ಮುಧೋಳ: ನಗರದ ವೆಂಕಟೇಶ ಮಹಾರಾಜಾ ಕೆರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಓಪನ್ ಜಿಮ್ ಕಾಮಗಾರಿಯನ್ನು ಶಾಸಕ ಆರ್.ಬಿ. ತಿಮ್ಮಾಪೂರ ಪರಿಶೀಲಿಸಿ, ಕಾಮಗಾರಿಯ ಗುಣಮಟ್ಟ ಹಾಗೂ ವೇಗದ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾರ್ವಜನಿಕರ ಆರೋಗ್ಯ ಮತ್ತು ದೈಹಿಕ ಫಿಟ್ನೆಸ್ ದಷ್ಟಿಯಿಂದ ಈ ಯೋಜನೆ ಮಹತ್ವದ್ದಾಗಿದ್ದು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡಬಾರದು ಎಂದು ಅವರು ತಿಳಿಸಿದರು. ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಶೀಘ್ರದಲ್ಲೇ ಜನಸಾಮಾನ್ಯರ ಬಳಕೆಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಾಂಗ್ರೆಸ್ ಮುಖಂಡರಾದ ಸದುಗೌಡ ಪಾಟೀಲ, ಅಶೋಕ್ ಕಿವಡಿ ಸೇರಿವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net