ಎಸ್‌ಐಆರ್ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ

 ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಎಸ್‌ಐಆರ್ ಕಾರ್ಯವನ್ನು ತಹಸೀಲ್ದಾರ ಗಿರೀಶ ಸ್ವಾದಿ ಪರಿಶೀಲಿಸುತ್ತಿರುವುದು. ವಿವಿಧ ಅಧಿಕಾರಿಗಳು ಇದ್ದರು.
ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಎಸ್‌ಐಆರ್ ಕಾರ್ಯವನ್ನು ತಹಸೀಲ್ದಾರ ಗಿರೀಶ ಸ್ವಾದಿ ಪರಿಶೀಲಿಸುತ್ತಿರುವುದು. ವಿವಿಧ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ಮತಗಟ್ಟೆಗಳಿಗೆ ತಹಸೀಲ್ದಾರ್ ಗಿರೀಶ ಸ್ವಾದಿ ಭೇಟಿ
  • ಮತದಾರರ ವಿವರಗಳ ಪರಿಶೀಲನೆ, ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಅರ್ಜಿ ಭರ್ತಿ ವೇಳೆ ಸಮಸ್ಯೆ ಎದುರಾದರೆ ಸಂಬಂಧಿತ ಬಿಎಲ್‌ಒ ಹಾಗೂ ಬಿಎಲ್‌ಎಗಳ ನೆರವು ಪಡೆಯಬಹುದಾಗಿದೆ
  • ತೇರದಾಳ ಕ್ಷೇತ್ರದ ವ್ಯಾಪ್ತಿಯ 236 ಮತಗಟ್ಟೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪಾರದರ್ಶಕ ಹಾಗೂ ಲೋಪರಹಿತವಾಗಿ ನಡೆಯುವಂತೆ ಅವರು ವಿಶೇಷ ಗಮನ ಹರಿಸಿದರು.
ರಬಕವಿ/ಬನಹಟ್ಟಿ: ಮತದಾರರು ಮತ್ತು ಸಿಬ್ಬಂದಿಗೆ ಯಾವುದೇ ಗೊಂದಲ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ಗಿರೀಶ ಸ್ವಾದಿ ಹೇಳಿದರು.
ತಾಲೂಕಿನಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತೇರದಾಳ ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಕಾರ್ಯ ಪ್ರಗತಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಮತದಾರರ ವಿವರಗಳ ಪರಿಶೀಲನೆ, ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಅರ್ಜಿ ಭರ್ತಿ ವೇಳೆ ಸಮಸ್ಯೆ ಎದುರಾದರೆ ಸಂಬಂಧಿತ ಬಿಎಲ್‌ಒ ಹಾಗೂ ಬಿಎಲ್‌ಎಗಳ ನೆರವು ಪಡೆಯಬಹುದಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಮೂಲ ಪ್ರಕ್ರಿಯೆಯಾಗಿದ್ದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆ ಹಾಗೂ ಅಗತ್ಯ ತಿದ್ದುಪಡಿಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಲು ಸಿಬ್ಬಂದಿ, ರಾಜಕೀಯ ಪಕ್ಷಗಳ ಪ್ರತಿನಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ತೇರದಾಳ ಕ್ಷೇತ್ರದ ವ್ಯಾಪ್ತಿಯ 236 ಮತಗಟ್ಟೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪಾರದರ್ಶಕ ಹಾಗೂ ಲೋಪರಹಿತವಾಗಿ ನಡೆಯುವಂತೆ ಅವರು ವಿಶೇಷ ಗಮನ ಹರಿಸಿದರು. ಬೂತ್ ಮಟ್ಟದ ಅಕಾರಿಗಳು (ಬಿಎಲ್‌ಒ) ಹಾಗೂ ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರಿಗೆ (ಬಿಎಲ್‌ಎ) ತರಬೇತಿ, ಅಗತ್ಯ ಮಾರ್ಗದರ್ಶನ ಹಾಗೂ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಮೂಲಕ ಕಾರ್ಯಕ್ಕೆ ವೇಗ ನೀಡಲಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net