ವಿದ್ಯಾರ್ಥಿಗಳ ಅಭಿವದ್ಧಿಗೆ ಗುಣಮಟ್ಟದ ಶಿಕ್ಷಣ ಅಗತ್ಯ

 ರಬಕವಿ-ಬವನಹಟ್ಟಿ ತಾಲೂಕಿನ ನಾವಲಗಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲೆ ಪ್ರಾರಂಭೋತ್ಸವ ಸಮಾರಂಭದಲ್ಲಿ ಮಕ್ಕಳೊಂದಿಗೆ ಶಾಸಕ ಸಿದ್ದು ಸವದಿ, ಗ್ರಾಪಂ ಮಾಜಿ ಅಧ್ಯಕ್ಷೆ ರೇಖಾ ಕಾಂತಿ, ಬಿಇಒ ಎ. ಕೆ. ಬಸಣ್ಣವರ ಮತ್ತಿತರರಿದ್ದರು.
ರಬಕವಿ-ಬವನಹಟ್ಟಿ ತಾಲೂಕಿನ ನಾವಲಗಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲೆ ಪ್ರಾರಂಭೋತ್ಸವ ಸಮಾರಂಭದಲ್ಲಿ ಮಕ್ಕಳೊಂದಿಗೆ ಶಾಸಕ ಸಿದ್ದು ಸವದಿ, ಗ್ರಾಪಂ ಮಾಜಿ ಅಧ್ಯಕ್ಷೆ ರೇಖಾ ಕಾಂತಿ, ಬಿಇಒ ಎ. ಕೆ. ಬಸಣ್ಣವರ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿದ್ದು ಸವದಿ ಹೇಳಿಕೆ
  • ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ
  • ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣವೇ ಬಲವಾದ ಅಡಿಪಾಯ
ರಬಕವಿ/ಬನಹಟ್ಟಿ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣವೇ ಬಲವಾದ ಅಡಿಪಾಯವಾಗಿದ್ದು, ಲಭ್ಯವಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಜ್ಞಾನ ಸಂಪಾದನೆಗೆ ಒತ್ತು ನೀಡಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
ತಾಲೂಕಿನ ನಾವಲಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವದಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವದ್ಧಿಗೆ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದ್ದು, ಶಿಕ್ಷಕರು ಮಕ್ಕಳಲ್ಲಿ ಸಂಸ್ಕಾರ, ಶಿಸ್ತು, ಆತ್ಮವಿಶ್ವಾಸ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಹೊಣೆ ಹೊತ್ತಿದ್ದಾರೆ ಎಂದು ಅವರು ತಿಳಿಸಿದರು.
ಬಿಇಒ ಎ.ಕೆ. ಬಸಣ್ಣವರ ಮಾತನಾಡಿ, ಸರ್ಕಾರ ಶಿಕ್ಷಣ ಕ್ಷೇತ್ರದ ಅಭಿವದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಶಿಷ್ಯವೇತನ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಕ್ಷೀರಭಾಗ್ಯ ಹಾಗೂ ಬಿಸಿಯೂಟ ಸೇರಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿದೆ ಎಂದರು. ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಾಧನೆ ಮಾಡಬೇಕುಬೇಕು ಎಂದು ಸಲಹೆ ನೀಡಿದರು.
ಸಿಆರ್‌ಪಿ ಜಗದೀಶ ಕುಲ್ಲೋಳ್ಳಿ, ಗ್ರಾಮದ ಹಿರಿಯರಾದ ಹಣಮಂತ ಸವದಿ, ಈರಪ್ಪ ವಾಲಿ, ಗುರು ಮರಡಿಮಠ, ರೇಖಾ ಕಾಂತಿ, ಎಸ್ಡಿಎಂಸಿ ಉಪಾಧ್ಯಕ್ಷ ಬಸವರಾಜ ಗಣಿ, ಗಂಗಪ್ಪ ಅಮ್ಮಲ್ಲಜೇರಿ, ಈರಪ್ಪ ಕಡಕಬಾವಿ, ಮುತ್ತಪ್ಪ ಅಂಗಡಿ, ಹಣಮಂತ ಮುಗದುಮ್, ಮಹೇಶ ಚಿಂಚಖಂಡಿ, ಮಂಜು ಕಾಂತಿ, ಮಹೇಶ ರಗಪ್ಪಗೋಳ, ಬಸಪ್ಪ ಶೇಗುಣಸಿ, ಬಸಪ್ಪ ಮೆಟಗುಡ್ಡ, ಸದಾಶಿವ ಸವದಿ, ಮುತ್ತು ಆಸಂಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net