ಗಣರಾಜ್ಯೋತ್ಸವ ಅದ್ದೂರಿ ಆಚರಣೆ

 ಬೀಳಗಿ ತಹಸೀಲ್ದಾರ ಕಚೇರಿಯಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ ವಿನೋದ ಹತ್ತಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಬಿಸಿಎಂ ಅಧಿಕಾರಿ ಮೀನಾಕ್ಷಿ ಕೋಟಿ, ಸಮಾಜ ಕಲ್ಯಾಣಾಧಿಕಾರಿ ಜಿ.ಎಸ್. ಗಡ್ಡದೇವರಮಠ, ಜಿ.ಪಂ. ಉಪವಿಭಾಗಾಧಿಕಾರಿ ಎಇಇ ಗೋವಿಂದ ಅರಳಿಕಟ್ಟಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ ವಿನೋದ ಹತ್ತಳ್ಳಿ ಮಾಹಿತಿ
  • ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ
  • ಗಣ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು
ಬೀಳಗಿ: ಗಣ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು. ಆಯಾ ಇಲಾಖೆ ಅಧಿಕಾರಿ ತಮ್ಮ ಕಾರ್ಯಾಲಯದಲ್ಲಿ ಧ್ವಜಾರೋಹಣ ಮಾಡಬೇಕು. ಪಟ್ಟಣದ ಗ್ರಾಮ ಚಾವಡಿ ಮುಂದೆ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಶಾಸಕ ಜೆ.ಟಿ. ಪಾಟೀಲ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ತಹಸೀಲ್ದಾರ ವಿನೋದ ಹತ್ತಳ್ಳಿ ಹೇಳಿದರು.
ಸ್ಥಳೀಯ ತಹಸೀಲ್ದಾರ ಕಚೇರಿ ಸಭಾ ಭವನಲ್ಲಿ ಗುರುವಾರ ನಡೆದ ಗಣರೋಜ್ಯೋತ್ಸವ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿವರ್ಷದಂತೆ ಈ ವರ್ಷ ಕೊಡ ಗಣರಾಜ್ಯೋತ್ಸವ ಅತ್ಯಂತ ಅದ್ದೂರಿ ಆಚರಣೆ ಮಾಡಲಾಗುವುದು. ಅಂದಿನ ಕಾರ್ಯಕ್ರಮ ಆಯಾ ಸಮಿತಿ ರಚನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಕುಂದುಕೊರತೆ ಬರದಂತೆ ಎಲ್ಲರೂ ನೋಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನ ಮಾಡಲಾಗುವುದು. ಶಾಲಾ ಮಕ್ಕಳಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಬಿಸಿಎಂ ಅಧಿಕಾರಿ ಮೀನಾಕ್ಷಿ ಕೋಟಿ, ಸಮಾಜ ಕಲ್ಯಾಣಾಧಿಕಾರಿ ಜಿ.ಎಸ್. ಗಡ್ಡದೇವರಮಠ, ಜಿ.ಪಂ. ಉಪವಿಭಾಗಾಧಿಕಾರಿ ಎಇಇ ಗೋವಿಂದ ಅರಳಿಕಟ್ಟಿ, ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಶಾಂಬಳೆ, ಅಕ್ಷರ ದಾಸೋಹ ಸಹಾಯಕ ನಿದೇಶಕ ಶಿವಾಜಿ ನಾಯಕ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net