ಗುರುವಾರ ತಹಸೀಲ್ದಾರ ಎಸ್.ಎಫ್. ಬೊಮ್ಮಣ್ಣವರ ನಿರ್ದೇಶನದ ಮೆರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ತಾಲೂಕ ಕಾರ್ಮಿಕ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಮಾಡಿ ಸಮೀಪದ ಮುರಡಿ ಗ್ರಾಮದ ಹತ್ತಿರ ಇಟ್ಟಿಗೆ ಭಟ್ಟಿಯಲ್ಲಿ ಒತ್ತೆಯಾಳಾಗಿ ಕೆಲಸ ಮಾಡುತ್ತಿದ್ದ ಒಡಿಸಾ ರಾಜ್ಯದ 10 ಜನ ಕಾರ್ಮಿಕರನ್ನು ರಕ್ಷಣೆ ಮಾಡಿದರು. ಬಳಿಕ ಅವರ ತವರಿಗೆ ಕಳುಹಿಸಿ ಕೊಡಲಾಯಿತು. ಈ ಬಗ್ಗೆ ಇಟ್ಟಿಗೆ ಭಟ್ಟಿ ಮಾಲೀಕ ಶರಣಪ್ಪ ಬಸಪ್ಪ ತೋಳಮಟ್ಟಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.