ನಿವೃತ್ತ ನೌಕರರ ಸಮಸ್ಯೆಗಳಿಗೆ ಸ್ಪಂದನೆ

ಹುನಗುಂದದ ಗುರುಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಸರ್ಕಾರಿ ನಿವೃತ್ತ ನೌಕರರ ಹಿತವರ್ಧಕ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ 70 ವರ್ಷ ಪೂರೈಸಿದ ಹಿರಿಯ ಚೇತನರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ಎ.ಕೆ.ಉಪನಾಳ, ಬಿ.ಎನ್.ನಾಗನಗೌಡ ಇದ್ದರು.
ಹುನಗುಂದದ ಗುರುಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಸರ್ಕಾರಿ ನಿವೃತ್ತ ನೌಕರರ ಹಿತವರ್ಧಕ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ 70 ವರ್ಷ ಪೂರೈಸಿದ ಹಿರಿಯ ಚೇತನರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ಎ.ಕೆ.ಉಪನಾಳ, ಬಿ.ಎನ್.ನಾಗನಗೌಡ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿಕೆ
  • ಹಿರಿಯ ಚೇತನರ ಸನ್ಮಾನ ಕಾರ್ಯಕ್ರಮ
  • ಸರ್ಕಾರಿ ನಿವೃತ್ತ ನೌಕರರ ಹಿತವರ್ಧಕ ಸಂಘ
ಹುನಗುಂದ: ನಿವೃತ್ತ ನೌಕರರ ಉತ್ಸಾಹ ಮತ್ತು ಸೇವಾ ಮನೋಭಾವ ಎಲ್ಲರಿಗೂ ಸೂರ್ತಿದಾಯಕವಾಗಿದೆ ಎಂದು ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.
ನಗರದ ಗುರುಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಸರ್ಕಾರಿ ನಿವೃತ್ತ ನೌಕರರ ಹಿತವರ್ಧಕ ಸಂಘದ 27ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ 70 ವರ್ಷ ಪೂರೈಸಿದ ಹಿರಿಯ ಚೇತನರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೌಕರರಿಗೆ ಯಾವುದೇ ಇಲಾಖೆಯಲ್ಲಿ ಸಮಸ್ಯೆಗಳು ಎದುರಾದಲ್ಲಿ ತಮ್ಮ ಗಮನಕ್ಕೆ ತರಲು ಸೂಚಿಸಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಗಮೇಶ ಪಾಟೀಲ ಮಾತನಾಡಿ, ನಿವೃತ್ತರು ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ, ತಮ್ಮ ಅನುಭವಗಳನ್ನು ಕುಟುಂಬದವರೊಂದಿಗೆ ಹಂಚಿಕೊಳ್ಳಬೇಕು ಎಂದರು.
ಸಂಘದ ಅಧ್ಯಕ್ಷ ಎ.ಕೆ. ಉಪನಾಳ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎನ್.ಬಿ. ನಾಗನಗೌಡ ಪ್ರಸ್ತಾವಿಕವಾಗಿ ಮಾತನಾಡಿದರು. ಸಿ.ಎಸ್. ಅಂಗಡಿ ವಾರ್ಷಿಕ ವರದಿ ವಾಚಿಸಿದರು. 70 ವರ್ಷ ಪೂರೈಸಿದ ಸದಸ್ಯರನ್ನು ಸನ್ಮಾನಿಸಲಾಯಿತು.
ಬಿ.ವೈ. ಕೊಡಗಾನೂರ, ಎಸ್.ಕೆ. ಕೊನೆಸಗಾರ, ವೈ.ವಿ. ಹೊಸಗೌಡರ, ಎನ್.ಎಂ. ನಾಡಗೌಡರ, ಎ.ಎಸ್. ಮಠ, ಎನ್.ಬಿ. ಕರಂಡಿ ಸೇರಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net