ಪಕ್ಷದಲ್ಲಿ ಜವಾಬ್ದಾರಿಯುತ ಸ್ಥಾನವಾದ ಜಿಲ್ಲಾ ವಕ್ತಾರರಾಗಿರುವ ನಾಗರಾಜ ಹದ್ಲಿ ಅವರು, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ಮೌಲ್ಯಗಳು, ಶಿಸ್ತು ಹಾಗೂ ಪಕ್ಷದ ನಿಲುವುಗಳನ್ನು ಮೀರಿ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆ ಆಗುತ್ತದೆ. ಇಂತಹ ನಡೆ ಪಕ್ಷದ ಇತರೆ ಸಮುದಾಯ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯದ ಮುಖಂಡರಿAದ ನಡೆದಿದ್ದರೆ ಅವರ ವಿರುದ್ಧ ತಕ್ಷಣವೇ ಶಿಸ್ತು ಕ್ರಮ ತೆಗೆದುಕೊಂಡು ಪಕ್ಷದಿಂದ ಉಚ್ಛಾಟನೆಯಂತ ಕ್ರಮ ಆಗುತ್ತಿದ್ದವು. ಹೀಗಾಗಿ ನಾಗರಾಜ ಹದ್ಲಿ ಅವರು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಬಗ್ಗೆ ತನಿಖೆ ನಡೆಸಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.