ಇಂದು ಹುಲ್ಯಾಳ ಗುರುದೇವಾಶ್ರಮದಲ್ಲಿ ಸತ್ಸಂಗ

ಹರ್ಷಾನಂದ ಮಹಾಸ್ವಾಮಿಗಳು
ಹರ್ಷಾನಂದ ಮಹಾಸ್ವಾಮಿಗಳು
Published on

ಪ್ರಮುಖ ಮುಖ್ಯಾಂಶಗಳು

  • ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ
  • ಗುರುದೇವ ಸತ್ಸಂಗ
ಜಮಖಂಡಿ: ತಾಲೂಕಿನ ಹುಲ್ಯಾಳ ಗ್ರಾಮದ ಗುರುದೇವಾಶ್ರಮದ ಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಮಾ. 22ರಂದು ಸಂಜೆ 6ಕ್ಕೆ ಗುರುದೇವ ಸತ್ಸಂಗ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಕುಂಚನೂರ-ಜಕನೂರ ಗ್ರಾಮಗಳ ಕಮರಿಮಠದ ಸಿದ್ಧಲಿಂಗ ಮಹಾಸ್ವಾಮಿಗಳು `ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ' ವಿಷಯ ಕುರಿತು ಅನುಭಾವ ಹಂಚಿಕೊಳ್ಳಲಿದ್ದಾರೆ. ಶ್ರೀ ಗುರುದೇವ ಸಂಗೀತ ಬಳಗದಿಂದ ಸಂಗೀತ ಸೇವೆ ನಡೆಯಲಿದೆ. ಬಸವಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಟಿ.ಪಿ. ಗಿರಡ್ಡಿ ಪ್ರಸಾದ ಸೇವೆ ನೆರವೇರಿಸುವರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗುರು ದೇವಾಶ್ರಮದ ಹರ್ಷಾನಂದ ಮಹಾಸ್ವಾಮಿಗಳು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net