ಬಾದಾಮಿ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ವಿಜ್ಞಾನ ವಸ್ತು ಪ್ರದರ್ಶ ವೀಕ್ಷಣೆ ಮಾಡಿದರು. ಸಹಾಯಕ ಪ್ರಾಧ್ಯಾಪಕ ವಿಠಲ ಕೊರಣ್ಣವರ, ಸಂಸ್ಥೆ ಸಮನ್ವಯಾಧಿಕಾರಿ ಡಾ. ರಾಘವನ್ ಕಾವಲನ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಭಿಮತ
ವಿಜ್ಞಾನ, ತಂತ್ರಜ್ಞಾನ
ಕಲಾ ಪ್ರದರ್ಶನ ವೀಕ್ಷಣೆ
ಬಾದಾಮಿ : ಇಲ್ಲಿನ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಕಾಳಿದಾಸ ಶಿಕ್ಷಣ ಸಂಘ ಕ್ಯಾಂಪಸ್‌ನಲ್ಲಿ ನಡೆದ ವಿಜ್ಞಾನ, ತಂತ್ರಜ್ಞಾನ ಮತ್ತು ಕಲಾ ಪ್ರದರ್ಶನವನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಪ್ರಯೋಗಗಳನ್ನು ಮಾಡುವುದರಿಂದ ವೈಜ್ಞಾನಿಕ ಮನೋಭಾವನೆ ಬೆಳೆಯುವುದರಿಂದ ಜೊತೆಗೆ ವಿಷಯ ಬಹಳ ದಿನಗಳವರೆಗೆ ನೆನಪಿನಲ್ಲಿರುತ್ತದೆ ಎಂದು ಹೇಳಿದರು.
ಕೆನಡಾ ಟೊರೊನಾಟೊ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ವಿಠಲ ಕೊರಣ್ಣವರ, ಸಂಸ್ಥೆ ಸಮನ್ವಯಾಧಿಕಾರಿ ಡಾ. ರಾಘವನ್ ಕಾವಲನ ಇತರರಿದ್ದರು.