ಬದುಕನ್ನು ಸೃಜನಾತ್ಮಕವಾಗಿ ರೂಪಿಸಿಕೊಳ್ಳಿ

ಬಾಗಲಕೋಟೆ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬಿಎ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸೃಜನೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ನೌಕರರ ಸಂಘದ ಜಿಲ್ಲಾಧ್ಯಕ್ಷ ಆನಂದ ಹಲಕುರ್ಕಿ ಉದ್ಘಾಟಿಸಿದರು. ಪ್ರಾಂಶುಪಾಲ ಡಾ. ಅರುಣಕುಮಾರ ಗಾಳಿ, ಪರಸಪ್ಪ ತಳವಾರ, ಡಾ. ಸುಮಂಗಲಾಮೇಟಿ ಮತ್ತಿತರರಿದ್ದರು.
ಬಾಗಲಕೋಟೆ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬಿಎ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸೃಜನೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ನೌಕರರ ಸಂಘದ ಜಿಲ್ಲಾಧ್ಯಕ್ಷ ಆನಂದ ಹಲಕುರ್ಕಿ ಉದ್ಘಾಟಿಸಿದರು. ಪ್ರಾಂಶುಪಾಲ ಡಾ. ಅರುಣಕುಮಾರ ಗಾಳಿ, ಪರಸಪ್ಪ ತಳವಾರ, ಡಾ. ಸುಮಂಗಲಾಮೇಟಿ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧ್ಯಕ್ಷ ಆನಂದ ಹಲಕುರ್ಕಿ ಅಭಿಮತ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ
  • ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪುಸ್ತಕದ ಜ್ಞಾನಾರ್ಜನೆಯಿಂದ ದೂರ ಸರಿಯುವ ವಾತಾವರಣ ನಿರ್ಮಾಣವಾಗುತ್ತಿದೆ.
ಬಾಗಲಕೋಟೆ: ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪುಸ್ತಕದ ಜ್ಞಾನಾರ್ಜನೆಯಿಂದ ದೂರ ಸರಿಯುವ ವಾತಾವರಣ ನಿರ್ಮಾಣವಾಗುತ್ತಿದೆ. ನಮ್ಮ ನೆಲದ ಜನಪದರು ಕಲೆ, ಸಂಸ್ಕೃತಿ ಸಂಪ್ರದಾಯವನ್ನು ಶ್ರೀಮಂತಗೊಳಿಸಿದ್ದು, ಬದುಕು ಸೃಜನಾತ್ಮಕವಾಗಿ ರೂಪಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ನೌಕರರ ಸಂಘದ ಜಿಲ್ಲಾಧ್ಯಕ್ಷ ಆನಂದ ಹಲಕುರ್ಕಿ ಹೇಳಿದರು.
ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬಿ.ಎ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸೃಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಬದುಕು ಸುಂದರಗೊಳ್ಳಬೇಕಾದರೆ ಶಿಕ್ಷಣ, ಸಂಸ್ಕಾರ, ಪರಿಶ್ರಮ ಅಗತ್ಯವಾಗಿದೆ. ಗುರು, ಹಿರಿಯರು ಹಾಕಿಕೊಟ್ಟಿರುವ ಮಾರ್ಗವನ್ನು ಜೀವನದಲ್ಲಿ ಅನುಸರಿಸಿಕೊಂಡಾಗ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಅರುಣಕುಮಾರ ಗಾಳಿ ಮಾತನಾಡಿ, ವಿದ್ಯಾರ್ಥಿಗಳು ಮೊದಲು ಜ್ಞಾನ ಸಂಪಾದನೆ ಮಾಡಿಕೊಂಡು ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಆದರ್ಶವಾದ ವ್ಯಕ್ತಿತ್ವ ಕಟ್ಟಿಕೊಳ್ಳಲು ತಾವು ಪಡೆಯುವ ಶಿಕ್ಷಣದ ಮೂಲಕ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಪ್ರೊ. ಪರಸಪ್ಪ ತಳವಾರ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಡಾ. ಸುಮಂಗಲಾ ಮೇಟಿ, ನೀಲಪ್ಪ ಕುರಿ, ಪ್ರೊ. ಸಂಪತ್ತ ಲಮಾಣಿ, ಪ್ರೊ. ಶಿವಶಂಕರ ಪ್ರಸಾದ, ಡಾ. ಮುಬೀನ್ ಬೆಳಗಾಂ, ಡಾ. ಸುಮನ್ ಮುಚಖಂಡಿ, ಪ್ರೊ. ಲೇಪಾಕ್ಷಯ್ಯ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net