ಇದ್ದಲಗಿಯಲ್ಲಿ ಹೊತ್ತುರಿದ ಶೆಡ್‌ಗಳು...!

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಹೊತ್ತಿಕೊಂಡಿರುವ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಆರಿಸಲು ಹರಸಾಹಸ ಪಡುತ್ತಿರುವುದು.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಹೊತ್ತಿಕೊಂಡಿರುವ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಆರಿಸಲು ಹರಸಾಹಸ ಪಡುತ್ತಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • 60ಕ್ಕೂ ಹೆಚ್ಚು ಗುಡಿಸಲುಗಳಿಗೆ ಬೆಂಕಿಯ ಕೆನ್ನಾಲಿಕೆ
  • ಸಿಲಿಂಡರ್ ಸ್ಫೋಟೋವೂ, ಶಾರ್ಟ್ ಸರ್ಕ್ಯೂಟ್ ಶಂಕೆ
  • ಯಾವುದೇ ಪ್ರಾಣಾಪಾಯವಿಲ್ಲ

ಬಾಗಲಕೋಟೆ:

ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಅಲ್ಲಿನ ಶೆಡ್‌ಗಳಲ್ಲಿ ದಿಢೀರನೇ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಅಂದಾಜು 60 ಶೆಡ್‌ಗಳಿಗೆ ಬೆಂಕಿಯ ಕೆನ್ನಾಲಿಗೆ ಚಾಚಿಕೊಂಡಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಸದ್ಯಕ್ಕೆ ಲಭ್ಯವಾಗಿಲ್ಲ.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್ ಸೇರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

ಪ್ರಾಣ ಉಳಿಸಿದ ಪುರಾಣ

ಬೆಂಕಿ ಅನಾಹುತ ಸಂಭವಿಸಿದಾಗ ಇದ್ದಲಗಿ ಗ್ರಾಮಸ್ಥರೆಲ್ಲರೂ ಶ್ರಾವಣ ಮಾಸದ ಅಂಗವಾಗಿ ಏರ್ಪಡಿಸಿದ್ದ ಪುರಾಣವನ್ನು ಆಲಿಸಲು ತೆರಳಿದ್ದರು. ಹೀಗಾಗಿ ಶೆಡ್‌ನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಸಿಲಿಂಡರ್ ಸ್ಫೋಟ ಅಥವಾ ಶಾರ್ಟ್ ಸಕ್ಯೂಟ್ ಕಾರಣವೋ ಎಂಬುದು ಪರಿಶೀಲನೆ ನಡೆಸಲಾಗುತ್ತಿದೆ. ಒಂದು ಜಾನುವಾರಿಗೆ ಪ್ರಾಣಹಾನಿ ಆಗಿದೆ ಎಂದು ಹೇಳಲಾಗುತ್ತಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಶೆಡ್‌ಗಳಿಗೆ ಹೊತ್ತಿಕೊಂಡಿರುವ ಬೆಂಕಿಯ ಕೆನ್ನಾಲಿಗೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net