ನಗರದ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಸಾರ್ವಜನಿಕ ಆರೋಗ್ಯ, ನೈರ್ಮಲ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಅಂಗನವಾಡಿ ಮುಂಭಾಗದಲ್ಲಿ ಅಸ್ವಚ್ಚತೆ ಕಂಡುಬAದಿತು. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಬಾಗಲಕೋಟೆ ಸಿಡಿಪಿಒ, ವೃತ್ತ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಅಲ್ಲದೆ ಚರಂಡಿ ತಡೆಯನ್ನು ತಕ್ಷಣ ತೆರವುಗೊಳಿಸಿ, ಅಂಗನವಾಡಿ ಸುತ್ತಮುತ್ತ ಸ್ವಚ್ಛತೆ ಹಾಗೂ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವಂತೆ ಅಽಕಾರಿಗಳಿಗೆ ನಿರ್ದೇಶನ ನೀಡಿದರು.