ಅನಂತಗಿರಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದ್ದು, 115 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಐವರು ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಕರು ಬೆಳಗ್ಗೆ ಚೆಕ್ ಇನ್ ಮತ್ತು ಸಂಜೆ ಚೆಕ್ ಔಟ್ ಕಾಮ್ಸ್ ಆಪ್‌ನಲ್ಲಿ ನಮೂದಿಸಬೇಕು. ಹಾಗೆಯೇ ವಿದ್ಯಾರ್ಥಿಗಳ ಹಾಜರಾತಿಯ ನಿರಂತರ ಆಪ್‌ನಲ್ಲಿ ಅಪ್‌ಲೋಡ್ ಮಾಡಲು ನಿತ್ಯ ಪರದಾಡುವ ಸ್ಥಿತಿ ಇದೆ. ನೆಟ್‌ವರ್ಕ್ ಸಿಕ್ಕರೆ ಸಿಕ್ಕಿತು, ಇಲ್ಲವಾದರೆ ಇಲ್ಲ ಎನ್ನುವ ಸ್ಥಿತಿ ಇದೆ ಎಂದು ಅಲ್ಲಿನ ಶಿಕ್ಷಕರು ಹೇಳುತ್ತಾರೆ.