ಸ್ವಾವಲಂಬನೆಯಿಂದ ಸಾಮಾಜಿಕ ಬದಲಾವಣೆ

 ಗುಳೇದಗುಡ್ಡದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ್ ವೃದ್ಧ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವಿತರಿಸಿದರು. ಅಭಿನವ ಒಪ್ಪತ್ತೇಶ್ವರ ಶ್ರೀಗಳು, ಅಭಿನವ ಕಾಡಸಿದ್ಧೇಶ್ವರ ಶ್ರೀಗಳು, ಪುರಸಭೆ ಮಾಜಿ ಅಧ್ಯಕ್ಷೆ ಭಾಗ್ಯಾ ಉದ್ನೂರ, ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ, ಮಾಜಿ ಶಾಸಕ ರಾಜಶೇಖರ ಶೀಲವಂತ ಇದ್ದರು.
ಗುಳೇದಗುಡ್ಡದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ್ ವೃದ್ಧ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವಿತರಿಸಿದರು. ಅಭಿನವ ಒಪ್ಪತ್ತೇಶ್ವರ ಶ್ರೀಗಳು, ಅಭಿನವ ಕಾಡಸಿದ್ಧೇಶ್ವರ ಶ್ರೀಗಳು, ಪುರಸಭೆ ಮಾಜಿ ಅಧ್ಯಕ್ಷೆ ಭಾಗ್ಯಾ ಉದ್ನೂರ, ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ, ಮಾಜಿ ಶಾಸಕ ರಾಜಶೇಖರ ಶೀಲವಂತ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜೆಡಿಎಸ್ ಜಿಲ್ಲಾಧ್ಯಕ್ಷ ಹಣಮಂತ ಮಾವಿನಮರದ ಅನಿಸಿಕೆ
  • ಧಾರ್ಮಿಕ ಮಹಾಸಭೆ ಆಯೋಜನೆ
  • ಧಾರ್ಮಿಕ ಮಹಾಸಭೆ ಕಾರ್ಯಕ್ರಮ
ಗುಳೇದಗುಡ್ಡ: ಮಹಿಳೆಯರನ್ನು ಸಮಾಜದಲ್ಲಿ ಸ್ವಾವಲಂಬಿಗಳನ್ನಾಗಿ ಮಾಡುವ ಮೂಲಕ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಹತ್ವದ ಬದಲಾವಣೆ ಮಾಡುತ್ತಿದೆ. ಮದ್ಯವರ್ಜನ ಶಿಬಿರ ಆಯೋಜಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.
ಪಟ್ಟಣದಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾದಾಮಿ ತಾಲೂಕು ಘಟಕ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಗುಳೇದಗುಡ್ಡ ವಲಯದ ಸಹಯೋಗದೊಂದಿಗೆ ಆಯೋಜಿಸಿದ್ದ ಧಾರ್ಮಿಕ ಮಹಾಸಭೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಸಾರಾಯಿ ಮತ್ತು ಮೌಢ್ಯ ಸಾಮಾಜಿಕ ದೊಡ್ಡ ಪಿಡುಗುಗಳಾಗಿವೆ. ದೇವರ ಹೆಸರಿನಲ್ಲಿ ವಂಚನೆ ನಿಲ್ಲಬೇಕಿದೆ. ಭಕ್ತಿಯಿಂದ ದೇವರ ಆರಾಧನೆ ಮಾಡಿರಿ. ಆದರೆ ಮೌಢ್ಯತೆಗೆ ಒಳಗಾಗಬೇಡಿ ಎಂದರು.
ಮಾಜಿ ಶಾಸಕ ರಾಜಶೇಖರ ಶೀಲವಂತ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡುತ್ತಿದೆ. ಧರ್ಮಸ್ಥಳ ಕ್ಷೇತ್ರದ ಪಾವಿತ್ರತೆ ಅಪವಿತ್ರಗೊಳಿಸುವ ಕಾರ್ಯಕ್ಕೆ ಕೈ ಹಾಕಿದವರಿಗೆ ಕ್ಷೇತ್ರದ ಆರಾಧ್ಯ ದೈವ ಶ್ರೀ ಮಂಜುನಾಥ ತಕ್ಕ ಶಿಕ್ಷೆ ನೀಡಿದ್ದಾನೆ ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಮಾತನಾಡಿ, ಅನೇಕ ಕುಟುಂಬಗಳ ಕನಸು ಈಗ ಧರ್ಮಸ್ಥಳ ಯೋಜನೆಯಿಂದ ನನಸಾಗುತ್ತಿವೆ. ಸ್ವಾರ್ಥವಿಲ್ಲದ ಪ್ರಾಮಾಣಿಕ ಸೇವೆಯಿಂದ ಯೋಜನೆ ರಾಜ್ಯದ ತುಂಬೆಲ್ಲ ಕೆಲಸ ಮಾಡುತ್ತಿದೆ. ಬಡ ಜನರ, ನಿರ್ಲಕ್ಷಿತ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರತಿಯೊಬ್ಬರಿಗೂ ನೆರವು ನೀಡುತ್ತಿದೆ. ಎಲ್ಲಿ ಪ್ರಾಮಾಣಿಕತೆ ಇರುತ್ತದೆಯೋ, ಅಲ್ಲಿ ಒಂದು ಸಾಮಾಜಿಕ ಬದಲಾವಣೆ ಸಾಧ್ಯ ಎಂಬುದಕ್ಕೆ ಧರ್ಮಸ್ಥಳ ಯೋಜನೆ ಸಾಕ್ಷಿಯಾಗುತ್ತದೆ ಎಂದು ತಿಳಿಸಿದರು.
ಅಭಿನವ ಒಪ್ಪತ್ತೇಶ್ವರ ಶ್ರೀಗಳು, ಅಭಿನವ ಕಾಡಸಿದ್ಧೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಪುರಸಭೆ ಮಾಜಿ ಅಧ್ಯಕ್ಷೆ ಭಾಗ್ಯಾ ಉದ್ನೂರ, ಸಂಗಪ್ಪ ಜವಳಿ, ಶಿವಯೋಗಿ ಚೋಳಚಗುಡ್ಡ, ಪ್ರಶಾಂತ ಜವಳಿ, ಅಶೋಕ ನಾಯನೆಗಲಿ, ರಾಜಣ್ಣ ಕೆರೂರ, ರಾಮಣ್ಣ ಚಂದರಗಿ, ಯೋಜನೆ ಜಿಲ್ಲಾ ನಿರ್ದೇಶಕ ಚೆನ್ನಕೇಶವ, ವಲಯ ಮೇಲ್ವಿಚಾರಕಿ ಪರ್ವೀನ್ ಮುಜಾವರ, ಮಲ್ಲಿಕಾರ್ಜುನ ಗಂಗಶೆಟ್ಟಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net