ಸಕಾರಾತ್ಮಕ ಚಿಂತನೆಗಳೊಂದಿಗೆ ಮಾನಸಿಕ ಶಕ್ತಿ ಗಟ್ಟಿಗೊಳಿಸಿ

ಬಾಗಲಕೋಟೆ ಬಸವೇಶ್ವರ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ. ಸಹನಾ ರಾವ್, ಕಾಲೇಜ್ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ, ಡಾ.ಎಸ್.ಎಂ. ಗಾಂವಕರ, ಪ್ರಾಚಾರ್ಯೆ ಎಸ್.ಆರ್. ದೇಶಪಾಂಡೆ ಇತರರಿದ್ದರು.
ಬಾಗಲಕೋಟೆ ಬಸವೇಶ್ವರ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ. ಸಹನಾ ರಾವ್, ಕಾಲೇಜ್ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ, ಡಾ.ಎಸ್.ಎಂ. ಗಾಂವಕರ, ಪ್ರಾಚಾರ್ಯೆ ಎಸ್.ಆರ್. ದೇಶಪಾಂಡೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ. ಸಹನಾ ರಾವ್ ಹೇಳಿಕೆ
  • ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
ಬಾಗಲಕೋಟೆ: ವಿದ್ಯಾರ್ಥಿಗಳಲ್ಲಿ ಇಚ್ಛಾಶಕ್ತಿ ಮತ್ತು ಕ್ರಿಯಾಶಕ್ತಿ ಬೆರತಾಗ ಮಾತ್ರ ಜ್ಞಾನಶಕ್ತಿ ಸಂಪಾದನೆ ಸಾಧ್ಯವಾಗುತ್ತದೆ ಎಂದು ಡಾ. ಸಹನಾ ರಾವ್ ಹೇಳಿದರು.
ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಬುಧವಾರ ನಡೆದ ಬಸವೇಶ್ವರ ವಿಜ್ಞಾನ ಪಿಯು ಕಾಲೇಜಿನ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜೀವನದಲ್ಲಿ ಸೋಲನ್ನು ಒಪ್ಪಿಕೊಂಡು ಅದರಿಂದ ಪಾಠ ಕಲಿತಾಗಲೇ ಗೆಲುವು ಸಾಧಿಸಲು ಸಾಧ್ಯ. ಸಕಾರಾತ್ಮಕ ಚಿಂತನೆಗಳ ಮೂಲಕ ಮಾನಸಿಕ ಶಕ್ತಿಯನ್ನು ಗಟ್ಟಿಗೊಳಿಸಿ ಆತ್ಮಬಲವನ್ನು ಹೆಚ್ಚಿಸಿಕೊಂಡಾಗ ಜ್ಞಾನದ ಅರಿವು ಮೂಡುತ್ತದೆ ಹಾಗೂ ಸಾಧನೆಯ ದಾರಿ ತೆರೆದುಕೊಳ್ಳುತ್ತದೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನಕ್ಕೆ ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಂತ ಅಗತ್ಯ ಎಂದು ಹೇಳಿದರು.
ಕಾಲೇಜ್ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ, ಪದವಿ ಪೂರ್ವ ಹಂತವು ವಿದ್ಯಾರ್ಥಿ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಪಾಲಕರ ಕನಸುಗಳನ್ನು ನನಸಾಗಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವಂತೆ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಕಲಿತ ಶಾಲೆ ಹಾಗೂ ಕಾಲೇಜಿನ ಜೊತೆಗೆ ತಂದೆ-ತಾಯಿಗಳಿಗೆ ಕೀರ್ತಿ ತರುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಅನುಷಾ ಹಕ್ಕೇರಿ, ಮಾಳಪ್ಪ ಅನಸೂರ ಹಾಗೂ ಪ್ರಶಾಂತ ಬಿರಾದಾರ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಡಾ.ಎಸ್.ಎಂ. ಗಾಂವಕರ, ಪ್ರಾಚಾರ್ಯೆ ಎಸ್.ಆರ್. ದೇಶಪಾಂಡೆ, ಪ್ರಾಚಾರ್ಯ ಡಾ. ಎನ್.ಎಚ್. ಬೇವಿನಹಳ್ಳಿ, ಪ್ರತಿಭಾ ಕಟ್ಟಿಮನಿ, ಎಸ್.ಎನ್. ಮಂಕಣಿ ಹಾಗೂ ಅಕ್ಷಯ ಗಲಗಲಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net