ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಳ್ಳಿರಿ

ಬಾದಾಮಿ ನಗರದ ಶ್ರೀ ಕಾಂಚನೇಶ್ವರ ವಿದ್ಯಾವರ್ಧಕ ಸಂಸ್ಥೆಯ ದಿ ಕೇಂಬ್ರಿಡ್ಜ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಕಾರ್ಯಕ್ರಮವನ್ನು ನಿವೃತ್ತ ಪ್ರಾಚಾರ್ಯ ರವೀಂದ್ರ ಮೂಲಿಮನಿ ಉದ್ಘಾಟಿಸಿದರು. ಬಿ.ಎಚ್. ಹಳಗೇರಿ, ರೂಪಶ್ರೀ ತ್ತೇಪುರ, ರೇಣುಕಾ ಗುಡ್ಡದ, ವೈ.ಎಸ್. ಗುಡ್ಡದ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ನಿವೃತ್ತ ಪ್ರಾಚಾರ್ಯ ರವೀಂದ್ರ ಮೂಲಿಮನಿ ಹೇಳಿಕೆ
  • ಶಾಲಾ ಸಂಸತ್ ಪದಾಧಿಕಾರಿಗಳ ಪದಗ್ರಹಣ
  • 2026-27ನೇ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಾಲಾ ಸಂಸತಗೆ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮ.
ಬಾದಾಮಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಓದುವುದರೊಂದಿಗೆ ಶಿಸ್ತು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ರವೀಂದ್ರ ಮೂಲಿಮನಿ ಹೇಳಿದರು.
ನಗರದ ಶ್ರೀ ಕಾಂಚನೇಶ್ವರ ವಿದ್ಯಾವರ್ಧಕ ಸಂಸ್ಥೆಯ ದಿ ಕೇಂಬ್ರಿಡ್ಜ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಾಲಾ ಸಂಸತಗೆ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಿ.ಎಚ್. ಹಳಗೇರಿ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕವಾಗಿದ್ದು, ಎಲ್ಲರೂ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಮುಖ್ಯಶಿಕ್ಷಕಿ ರೂಪಶ್ರೀ ತ್ತೇಪುರ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಸ್ಥೆ ಅಧ್ಯಕ್ಷೆ ರೇಣುಕಾ ಗುಡ್ಡದ, ಸಂಸ್ಥಾಪಕ ಅಧ್ಯಕ್ಷ ವೈ.ಎಸ್. ಗುಡ್ಡದ, ಆಡಳಿತಾಧಿಕಾರಿ ಅರವಿಂದ ಗುಡ್ಡದ, ಶಿಕ್ಷಕ ಎಚ್.ಆರ್.ಕಡಿವಾಲ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net