ಹನಗಂಡಿ ಗ್ರಾಮದಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ರಬಕವಿ, ಬನಹಟ್ಟಿ ಸೇರಿ ವಿವಿಧ ಕಾಲೇಜ್‌ಗಳಿಗೆ ತೆರಳುತ್ತಾರೆ. ಆದರೆ ಬಸ್‌ಗಳು ತೇರದಾಳದಿಂದಲೇ ತುಂಬಿಕೊಂಡು ಬರುವುದರಿಂದ ಹನಗಂಡಿಯಲ್ಲಿ ವಿದ್ಯಾರ್ಥಿಗಳಿಗೆ ಹತ್ತಲು ಅವಕಾಶ ಸಿಗುತ್ತಿಲ್ಲ. ಇದರಿಂದ ಅನೇಕ ವಿದ್ಯಾರ್ಥಿಗಳು ತರಗತಿಗಳಿಗೆ ಗೈರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.