ಪ್ರಾಯೋಗಿಕ ಜ್ಞಾನದಿಂದ ಮಾಧ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ

ಮುಧೋಳದ ಎಸ್.ಆರ್. ಕಂಠಿ ಮಹಾವಿದ್ಯಾಲಯದಲ್ಲಿ ನಡೆದ ಪತ್ರಿಕಾ ದಿನಾಚರಣೆ-2026 ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಚಂದ್ರಶೇಖರ ಪಮ್ಮಾರ ಉದ್ಘಾಟಿಸಿದರು. ಪ್ರೊ. ಅಜಯ ಕಡೂರ, ವಿಶ್ವನಾಥ ಮುನವಳ್ಳಿ ಪ್ರೀತಿ ಬಾವಲತ್ತಿ, ಸ್ನೇಹಾ ಕರಡಿ ಇತರರಿದ್ದರು.
ಮುಧೋಳದ ಎಸ್.ಆರ್. ಕಂಠಿ ಮಹಾವಿದ್ಯಾಲಯದಲ್ಲಿ ನಡೆದ ಪತ್ರಿಕಾ ದಿನಾಚರಣೆ-2026 ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಚಂದ್ರಶೇಖರ ಪಮ್ಮಾರ ಉದ್ಘಾಟಿಸಿದರು. ಪ್ರೊ. ಅಜಯ ಕಡೂರ, ವಿಶ್ವನಾಥ ಮುನವಳ್ಳಿ ಪ್ರೀತಿ ಬಾವಲತ್ತಿ, ಸ್ನೇಹಾ ಕರಡಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಿರಿಯ ಪತ್ರಕರ್ತ ಚಂದ್ರಶೇಖರ ಪಮ್ಮಾರ ಹೇಳಿಕೆ
  • ಪತ್ರಿಕಾ ದಿನಾಚರಣೆ ಕಾರ್ಯಕ್ರಮ
ಮುಧೋಳ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು, ಗೌರವ ಮತ್ತು ಉನ್ನತ ಸ್ಥಾನಮಾನ ಗಳಿಸಲು ವಿದ್ಯಾರ್ಥಿಗಳು ಬರವಣಿಗೆ ಕೌಶಲ, ಸೃಜನಶೀಲತೆ ಹಾಗೂ ಪ್ರಾಯೋಗಿಕ ಜ್ಞಾನವನ್ನು ಮೈಗೂಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಚಂದ್ರಶೇಖರ ಪಮ್ಮಾರ ಹೇಳಿದರು.
ನಗರದ ಎಸ್.ಆರ್. ಕಂಠಿ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಗುರುವಾರ ಆಯೋಜಿಸಿದ್ದ 'ಪತ್ರಿಕಾ ದಿನಾಚರಣೆ-2026' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾಧ್ಯಮ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಪದವಿ ಹಂತದಲ್ಲಿಯೇ ಉತ್ತಮ ಲೇಖನಗಳನ್ನು ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಜ್ಞಾನದೊಂದಿಗೆ ವಿಡಿಯೋ ಎಡಿಟಿಂಗ್ ಕೌಶಲವನ್ನು ಅಳವಡಿಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಇಂದಿನ ಡಿಜಿಟಲ್ ಯುಗದಲ್ಲಿ ನಾಲ್ಕೈದು ಭಾಷೆಗಳ ಜ್ಞಾನವೂ ಅಗತ್ಯವಾಗಿದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ವೃತ್ತಿಪರತೆ ಮತ್ತು ಜವಾಬ್ದಾರಿಯುತ ಪತ್ರಿಕೋದ್ಯಮಕ್ಕೆ ಹೆಚ್ಚಿನ ಮಹತ್ವವಿದೆ. ಸಾಮಾಜಿಕ ಮಾಧ್ಯಮಗಳನ್ನು ಸಕಾರಾತ್ಮಕವಾಗಿ ಬಳಸಿಕೊಂಡು ಹೆಸರು ಮತ್ತು ಆದಾಯ ಎರಡನ್ನೂ ಗಳಿಸಲು ಅವಕಾಶಗಳಿವೆ ಎಂದು ತಿಳಿಸಿದರು.
ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ಎಂ.ಎಚ್. ಜೋಗಿ ಮಾತನಾಡಿ, ಮಾಧ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ವೃತ್ತಿ ಕೌಶಲಗಳನ್ನು ನಿರಂತರವಾಗಿ ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾಲಯದ ಸಂಶೋಧನಾರ್ಥಿ ಶಿವಾನಂದ ನೇಗಿನಾಳ ಮಾತನಾಡಿ, ಆಸಕ್ತಿ ಮತ್ತು ಅಭಿರುಚಿಗೆ ತಕ್ಕ ವೃತ್ತಿಜೀವನ ರೂಪಿಸಿಕೊಳ್ಳಲು ಪತ್ರಿಕೋದ್ಯಮ ಶಿಕ್ಷಣ ಉತ್ತಮ ವೇದಿಕೆಯಾಗಿದೆ ಎಂದರು.
ಪ್ರಾಚಾರ್ಯ ಡಾ. ಎಂ.ಆರ್. ಜರಕುಂಟಿ ಮಾತನಾಡಿ, ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಟುಡಿಯೋ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಾಯೋಗಿಕ ಜ್ಞಾನ ವೃದ್ಧಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಯೋಜಕ ಪ್ರೊ. ಅಜಯ ಕಡೂರ, ಪ್ರೀತಿ ಬಾವಲತ್ತಿ, ಸ್ನೇಹಾ ಕರಡಿ, ಮಹಾದೇವಿ ಕಾಳವ್ವಗೋಳ, ಶೋಭಾ ಸತ್ತಿಗೇರಿ, ಅನ್ನಪೂರ್ಣ ಅವರಾ, ಬಾಬು ಭಜಂತ್ರಿ, ಮಹಾಂತೇಶ ಹಿರೇಮಠ ಸೇರಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net