ಏಕಾಗ್ರತೆಯಿಂದ ಯಶಸ್ಸು ಸಾಧ್ಯ

ಗುಳೇದಗುಡ್ಡದ ಎಂ.ಎಚ್ ಆಡಿನ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಸುರೇಶ ಕುಲಕರ್ಣಿ ಅವರನ್ನು ಗೌರವಿಸಲಾಯಿತು. ಡಾ. ಪಿ.ಎಸ್. ಹೆಗಡೆ, ವಕೀಲ ಕೆ.ಎಂ. ರಾಯಚೂರ, ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಉಪಪ್ರಾಚಾರ್ಯ ಎಂ.ಪಿ. ಮಾಗಿ, ಬಾಲಕರ ಸರ್ಕಾರಿ ಪ್ರೌಢಶಾಲೆಯ ಪ್ರಾಚಾರ್ಯ ಎನ್.ಸಿ. ಮುದಕವಿ, ಪಿ.ಎಸ್. ಪಾಟೀಲ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಅಭಿಮತ
  • ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ ಕಾರ್ಯಾಗಾರ ಆಯೋಜನೆ
  • ವಿದ್ಯಾರ್ಥಿಗಳು ಪ್ರೌಢಶಾಲಾ ಹಂತದಲ್ಲಿ ಉತ್ತಮ ಅಂಕಗಳಿಸಬೇಕು.
ಗುಳೇದಗುಡ್ಡ : ವಿದ್ಯಾರ್ಥಿಗಳು ಅಧ್ಯಯನದಲ್ಲಿ ಏಕಾಗ್ರತೆಯಿಂದ ತೊಡಗಿಕೊಂಡಾಗ ಮಾತ್ರ ಪಠ್ಯದಲ್ಲಿ ಬರುವ ಕ್ಲಿಷ್ಟ ಸಮಸ್ಯೆಗಳನ್ನು ಅರ್ಥೈಸಿಕೊಳ್ಳಲು, ಬಿಡಿಸಲು ಸಾಧ್ಯವಾಗುತ್ತದೆ ಎಂದು ಧಾರವಾಡದ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಹೇಳಿದರು.
ಪಟ್ಟಣದ ಎಂ.ಎಚ್. ಆಡಿನ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ’ ಒಂದು ದಿನದ ಉಚಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿಜ್ಞಾನ, ಗಣಿತ ವಿಷಯದ ಕ್ಲಿಷ್ಟ ಪರಿಕಲ್ಪನೆಗಳನ್ನು ಶೀಘ್ರವಾಗಿ ಬಿಡಿಸುವ ಸರಳವಾದ ಕೌಶಲ ಅಳವಡಿಸಿಕೊಳ್ಳಬೇಕು ಎಂದರು.
ಡಾ. ಪಿ.ಎಸ್. ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಶಾಲಾ ಹಂತದಲ್ಲಿ ಉತ್ತಮ ಅಂಕಗಳಿಸಬೇಕು. ಪಿಯು ಹಂತದಲ್ಲಿ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಉತ್ತಮ ಎನ್ನುವುದನ್ನು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಪಟ್ಟಣದ ವಿವಿಧ ಶಾಲೆಯ 250 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ವಕೀಲ ಕೆ.ಎಂ. ರಾಯಚೂರ, ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಉಪ ಪ್ರಾಚಾರ್ಯ ಎಂ.ಪಿ. ಮಾಗಿ, ಬಾಲಕರ ಸರ್ಕಾರಿ ಪ್ರೌಢಶಾಲೆ ಪ್ರಾಚಾರ್ಯ ಎನ್.ಸಿ. ಮುದಕವಿ, ಪಿ.ಎಸ್. ಪಾಟೀಲ, ಆಡಿನ ಪ್ರೌಢಶಾಲೆಯ ಎನ್.ವಿ. ದೊಡಮನಿ, ಶಿಕ್ಷಕ ರಾಜಶೇಖರ ಪಾಗಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net