ಆ. ೧೭ ರಂದು ಬಿಟ್ಟು ಹೋದ ಮಕ್ಕಳಿಗೆ ಮಾತ್ರೆ

ಬಾಗಲಕೋಟೆಯಲ್ಲಿ ಸೋಮವಾರ ಜಂತುಹುಳು ನಿವಾರಣೆಗಾಗಿ ಸಾಮೂಹಿಕ ಅಲ್ಪೆಂಡಜೋಲ್ ಮಾತ್ರೆ ನುಂಗಿಸುವ ಕಾರ್ಯಕ್ರಮಕ್ಕೆ ಡಿಎಚ್‌ಒ ಡಾ.ರಾಜಕುಮಾರ ಯರಗಲ್ಲ ಚಾಲನೆ ನೀಡಿದರು.
ಬಾಗಲಕೋಟೆಯಲ್ಲಿ ಸೋಮವಾರ ಜಂತುಹುಳು ನಿವಾರಣೆಗಾಗಿ ಸಾಮೂಹಿಕ ಅಲ್ಪೆಂಡಜೋಲ್ ಮಾತ್ರೆ ನುಂಗಿಸುವ ಕಾರ್ಯಕ್ರಮಕ್ಕೆ ಡಿಎಚ್‌ಒ ಡಾ.ರಾಜಕುಮಾರ ಯರಗಲ್ಲ ಚಾಲನೆ ನೀಡಿದರು.
Published on

ಜಂತುಹುಳು ಸೋಂಕಿನಿAದ ಮಕ್ಕಳ ಆರೋಗ್ಯ, ಪೌಷ್ಠಿಕತೆ ಹಾಗೂ ಬೆಳೆವಣಿಗೆಯ ಮೇಲೆ ಉಂಟಾಗಬಹುದಾದ ದುಷ್ಪರಿಣಾಮಗಳನ್ನು ತಡೆಗಟ್ಟಲು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಿಸಲಾಗುತ್ತಿದೆ. ಮಕ್ಕಳು ತಪ್ಪದೇ ಮಾತ್ರೆಗಳನ್ನು ಪಡೆದುಕೊಳ್ಳಬೇಕು. ಇದೀಗ ಬಿಟ್ಟು ಹೋಗಿರುವ ಮಕ್ಕಳಿಗೆ ಆ. ೧೭ ರಂದು ಮಾತ್ರೆ ನುಂಗಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ರಾಜಕುಮಾರ ಯರಗಲ್ಲ ಹೇಳಿದರು.

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆಯಿಂದ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕವಾಗಿ ಅಲ್ಪೆಂಡಜೋಲ್ ಮಾತ್ರೆ ನುಂಗಿಸುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
೧ ರಿಂದ ೧೯ ವರ್ಷದೊಳಗಿನ ಮಕ್ಕಳಿಗೆ ನಿಗದಿತ ಪ್ರಮಾಣದಲ್ಲಿ ಅಲ್ಪೆಂಡಜೋಲ್ ಮಾತ್ರೆ ನೀಡುವ ಮೂಲಕ ಜಂತುಹುಳು ಸೋಂಕಿನ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ. ಶಾಲಾ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ತೆರಳಿ ಮಕ್ಕಳಿ ನೀಡಲಾಗುತ್ತಿದೆ. ಮಕ್ಕಳು ತಪ್ಪದೇ ಮಾತ್ರೆಗಳನ್ನು ಪಡೆದುಕೊಳ್ಳಬೇಕು ಎಂದರು.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಮುಖ್ಯ ಗುರುಮಾತೆ ಗಿರಿಜಾ ನಡುವಿನಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಽಕಾರಿ ಡಾ.ಶಿವನಗೌಡ ಪಾಟೀಲ, ಜಿಲ್ಲಾ ಸಮೀಕ್ಷಣಾಽಕಾರಿ ಡಾ.ಸೂರ್ಯವಂಶಿ, ತಾಲೂಕಾ ಆರೋಗ್ಯಾಽಕಾರಿ ಡಾ.ಸರಸ್ವತಿ, ಡಾ.ಅಂಕಿತ, ಡಾ.ಸುಮಿತ್ರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net