ಉಚಿತ ಬಸ್ ಪಾಸ್‌ನಿಂದ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಪ್ರತಿದಿನ ಯಾವುದೇ ಆರ್ಥಿಕ ಹೊರೆಯಿಲ್ಲದೆ ಶಾಲೆ ಹಾಗೂ ಕಾಲೇಜುಗಳಿಗೆ ಪ್ರಯಾಣಿಸಬಹುದಾಗಿದೆ. ಇದರಿಂದ ಶಿಕ್ಷಣದಿಂದ ಯಾರೂ ವಂಚಿತರಾಗದೆ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಅವಕಾಶ ಸಿಗುತ್ತದೆ. ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದು ವೈದ್ಯರು, ಇಂಜಿನಿಯರ್‌ಗಳು, ಐಎಎಸ್, ಐಪಿಎಸ್ ಅಧಿಕಾರಿಗಳು, ವಿಜ್ಞಾನಿಗಳು, ಶಿಕ್ಷಕರು ಹಾಗೂ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ತಮ್ಮ ಕುಟುಂಬ, ಊರು, ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.