ಬಾದಾಮಿ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವವನ್ನು ಬಿಇಒ ಕೇಶವ ಪೆಟ್ಲೂರ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ರಂಗಪ್ಪ ಕಳಸದ, ಮಾಜಿ ಪುರಸಭೆ ಸದಸ್ಯ ಮಹಾಂತೇಶ ತಳವಾರ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಬಿಇಒ ಕೇಶವ ವಾಮನ ಪೆಟ್ಲೂರ ಸಲಹೆ
ಪ್ರಾರಂಭೋತ್ಸವ ಅದ್ದೂರಿ
200 ಉಚಿತ ಬ್ಯಾಗ್ ವಿತರಣೆ
ಬಾದಾಮಿ: ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಪ್ರೋತ್ಸಾಹ ಧನ ಸೌಲಭ್ಯಗಳನ್ನು ಪಾಲಕರು ಸದುಪಯೋಗಪಡಿಸಿಕೊಂಡು ಮಕ್ಕಳನ್ನು ದಾಖಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ ಮನವಿ ಮಾಡಿದರು.
ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಬಿಸಿಯೂಟ, ಹಾಲು, ಸಮವಸ್ತ್ರ, ಪಾದರಕ್ಷೆ ಸೇರಿ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಹುಬ್ಬಳ್ಳಿಯ ತತ್ವದರ್ಶಿ ಆಸ್ಪತ್ರೆಯ ವೈದ್ಯ ಡಾ. ರಮೇಶ್ ತಿಮ್ಮನಾಯ್ಕರ ನೀಡಿದ 50 ಸಾವಿರ ರೂ. ಮೌಲ್ಯದ ಕಿಟ್‌ಗಳನ್ನು ವಿತರಿಸಲಾಯಿತು. ಎಲ್‌ಕೆಜಿಯಿಂದ 8ನೇ ತರಗತಿವರೆಗೆ ಹೊಸದಾಗಿ ದಾಖಲಾಗಿದ 200 ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ರಂಗಪ್ಪ ಕಳಸದ, ಮಾಜಿ ಪುರಸಭೆ ಸದಸ್ಯ ಮಹಾಂತೇಶ ತಳವಾರ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.