ಶಿಕ್ಷಕರು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪ

ಮುಧೋಳ ನಗರದ ಕಸಾಪ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಐ.ಎಚ್. ಪಠಾಣ ಅವರ ಮನದ ಮಳೆ ಕವನ ಸಂಕಲನವನ್ನು ಹಿರಿಯ ಸಾಹಿತಿ ಡಾ. ಶಿವಾನಂದ ಕುಬಸದ ಬಿಡುಗಡೆಗೊಳಿಸಿದರು. ಡಿಡಿಪಿಐ ಎ.ಸಿ. ಮನ್ನಿಕೇರಿ, ಸಂಸ್ಥೆಯ ಅಧ್ಯಕ್ಷ ಎಸ್.ಬಿ. ನ್ಯಾಮಗೌಡರ, ಕಸಾಪ ತಾಲೂಕು ಅಧ್ಯಕ್ಷ ಆನಂದ ಪೂಜಾರಿ, ಸ್ವಪ್ನಾ ಅನ್ನಿಗೋಳ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಎನ್.ಎಸ್. ಪಂಚಗಾರ ಶ್ಲಾಘನೆ
  • ಕವನ ಸಂಕಲನ ಬಿಡುಗಡೆ
ಮುಧೋಳ: ಶಿಕ್ಷಕರು ತಮ್ಮ ಜ್ಞಾನವನ್ನು ಹಂಚುವ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕು ನೀಡುವ ಮಹತ್ವದ ಹೊಣೆಗಾರಿಕೆ ಹೊಂದಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ಎನ್.ಎಸ್. ಪಂಚಗಾರ ಹೇಳಿದರು.
ನಗರದ ಕಸಾಪ ಭವನದಲ್ಲಿ ಆಯೋಜಿಸಿದ್ದ ಮನದ ಮಳೆ ಕವನ ಸಂಕಲನ ಬಿಡುಗಡೆ ಹಾಗೂ ಜಿಎನ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಜಿ.ಎಚ್. ಕಾಂಬಳೆ ಹಾಗೂ ಐ.ಎಚ್. ಪಠಾಣ ಅವರ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ನಿವೃತ್ತಿ ಹೊಂದುತ್ತಿರುವ ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಅತ್ಯಂತ ಶ್ರದ್ಧೆಯಿಂದ ಕಾರ್ಯನಿರ್ವಹಿಸಿದ್ದಾರೆ ಎಂಬುವುದಕ್ಕೆ ಇಲ್ಲಿ ನೆರೆದಿರುವ ನೂರಾರು ವಿದ್ಯಾರ್ಥಿಗಳು, ಪಾಲಕರು ಮತ್ತು ಅಭಿಮಾನಿಗಳೇ ಸಾಕ್ಷಿ ಎಂದು ಶ್ಲಾಘಿಸಿದರು.
ಹಿರಿಯ ಸಾಹಿತಿ ಡಾ. ಶಿವಾನಂದ ಕುಬಸದ ಮಾತನಾಡಿ, ಪಠಾಣ ಅವರ ಕವನಗಳು ಜೀವನದ ನಿಜವಾದ ಅನುಭವಗಳನ್ನು ಮನಮುಟ್ಟುವ ರೀತಿಯಲ್ಲಿ ವ್ಯಕ್ತಪಡಿಸುತ್ತವೆ. ಮಾನವೀಯ ಸಂಬಂಧಗಳು ಮತ್ತು ಭಾವನೆಗಳನ್ನು ಕಾವ್ಯದ ಮೂಲಕ ಹಂಚಿಕೊಳ್ಳುವ ವಿಶಿಷ್ಟ ಪ್ರಯತ್ನ ಇದಾಗಿದೆ ಎಂದು ಹೇಳಿದರು.
ಡಿಡಿಪಿಐ ಎ.ಸಿ. ಮನ್ನಿಕೇರಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎಸ್.ಬಿ. ನ್ಯಾಮಗೌಡರ, ಕಸಾಪ ತಾಲೂಕು ಅಧ್ಯಕ್ಷ ಆನಂದ ಪೂಜಾರಿ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕಿ ಸ್ವಪ್ನಾ ಅನ್ನಿಗೋಳ, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್.ಎ. ನಾಡಗೌಡರ, ರಾಜೇಶ್ವರಿ ಕಂಕನವಾಡಿ, ಅನಸೂಯಾ ಬಾಗಿ, ಬಿ.ಎಚ್. ಬೀಳಗಿ, ಹಣಮಂತ ವಜ್ಜರಮಟ್ಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net