ಇಳಕಲ್ಲದ ಶ್ರೀ ವಿಜಯ ಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ವಿಶ್ವಗುರು ಬಸವಣ್ಣನವರ ವಚನ ಸಾಹಿತ್ಯ ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಲಕ್ಷಾಂತರ ಭಕ್ತರ ಜಯಘೋಷ
ವಿವಿಧ ಮಠಾಧೀಶರು ಭಾಗಿ
ಸಚಿವ ವಿಜಯಾನಂದ ಕಾಶಪ್ಪನವರ ಕುಟುಂಬ ಹಾಗೂ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಕುಟುಂಬಸ್ಥರು ಆಗಮಿಸಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಇಳಕಲ್ಲ: ನಗರದ ಚಿತ್ತರಗಿ ಶ್ರೀ ವಿಜಯ ಮಹಾಂತೇಶ ಸಂಸ್ಥಾನ ಮಠದ ಪರಮ ದಾಸೋಹಿ ಶ್ರೀ ವಿಜಯ ಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ವಿಶ್ವಗುರು ಬಸವಣ್ಣನವರ ವಚನ ಸಾಹಿತ್ಯದ ಮಹಾರಥೋತ್ಸವ ಸಡಗರ ಸಂಭ್ರಮದಿಂದ ಸೋಮವಾರ ಜರುಗಿತು.
ಶ್ರಾವಣ ಮಾಸದ ಕೊನೆಯ ಸೋಮವಾರ ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆಗೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ವಿಶೇಷ ದರ್ಶನ ಪಡೆದು ಪುನೀತರಾದರು.
ಸಚಿವ ವಿಜಯಾನಂದ ಕಾಶಪ್ಪನವರ ಕುಟುಂಬ ಹಾಗೂ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಕುಟುಂಬಸ್ಥರು ಆಗಮಿಸಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಬಗೆಯ ಪುಷ್ಪಗಳಿಂದ ಕಣ್ಮನ ಸೆಳೆಯುವಂತೆ ಅಲಂಕಾರಗೊಂಡಿದ್ದ ಮಹಾರಥೋತ್ಸವಕ್ಕೆ ಹೇರೂರು ಗ್ರಾಮದಿಂದ ಒಂದು ತೇರಿನ ಹಗ್ಗ ಹಾಗೂ ಕಿಲ್ಲಾ ಓಣಿಯಿಂದ ಮತ್ತೊಂದು ತೇರಿನ ಹಗ್ಗವನ್ನು ವಾದ್ಯ ಮೇಳದೊಂದಿಗೆ ತರಲಾಯಿತು. ವಿಶ್ವಗುರು ಬಸವಣ್ಣ ಹಾಗೂ ವಿಜಯ ಮಹಾಂತ ಶಿವಯೋಗಿಗಳಿಗೆ ಲಕ್ಷಾಂತರ ಭಕ್ತರು ಜಯಘೋಷಗಳನ್ನು ಕೂಗುತ್ತಾ ಮಹಾರಥವನ್ನು ಭಕ್ತಿಪೂರ್ವಕವಾಗಿ ಎಳೆದು ಸಂಭ್ರಮಿಸಿದರು. ಉತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ನಿಯೋಜಿಸಲಾಗಿತ್ತು