ದೇಶದ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ

 ಗುಳೇದಗುಡ್ಡ ಪಟ್ಟಣದ ಬಸವೇಶ್ವರ ಪತ್ತಿನ ಸಹಕಾರಿ ಸಂಘದ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಲೋಕೇಶ್ವರ ಸಂಘದ ಅಧ್ಯಕ್ಷ ಶಿವಾನಂದ ಉದಪುಡಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪೂರ ಮತ್ತಿತರರಿದ್ದರು.
ಗುಳೇದಗುಡ್ಡ ಪಟ್ಟಣದ ಬಸವೇಶ್ವರ ಪತ್ತಿನ ಸಹಕಾರಿ ಸಂಘದ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಲೋಕೇಶ್ವರ ಸಂಘದ ಅಧ್ಯಕ್ಷ ಶಿವಾನಂದ ಉದಪುಡಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪೂರ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಿವಾನಂದ ಪಾಟೀಲ ಹೇಳಿಕೆ
  • 25ನೇ ವರ್ಷದ ರಜತ ಮಹೋತ್ಸವ
  • ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವ
ಗುಳೇದಗುಡ್ಡ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಬಡವರ ಸ್ವಾವಲಂಬನೆಗೆ ಇದು ಬಲವಾದ ಆಧಾರವಾಗಿದೆ ಎಂದು ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ಪತ್ತಿನ ಸಹಕಾರಿ ಸಂಘದ 25ನೇ ವರ್ಷದ ರಜತ ಮಹೋತ್ಸವ ಅಂಗವಾಗಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ಗಳು ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ರಾಷ್ಟ್ರೀಕತ ಬ್ಯಾಂಕುಗಳಿಗಿಂತ ಸಹಕಾರಿ ಕ್ಷೇತ್ರದಲ್ಲಿ ಸಾಲ ವಿತರಣೆಯು ಸುಲಭವಾಗಿದೆ ಎಂದರು.
ವಿಪತ್ತು ಹಾಗೂ ಬರ ಪರಿಸ್ಥಿತಿಗಳಲ್ಲಿ ಸರ್ಕಾರಗಳ ಸಾಲಮನ್ನಾ ಕ್ರಮದಿಂದ ವಿಜಯಪುರ ಹಾಗೂ ಬಾಗಲಕೋಟೆ ಡಿಸಿಸಿ ಬ್ಯಾಂಕುಗಳಲ್ಲಿ ಸುಮಾರು 7500 ಕೋಟಿ ರೂ. ಸಾಲಮನ್ನಾ ಆಗಿರುವುದನ್ನು ಅವರು ಉಲ್ಲೇಖಿಸಿದರು. ಸಹಕಾರಿ ಚಳುವಳಿಯು ಬಡವರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು.
ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿ, ಸಾಲ ವಿತರಣೆಯಿಗಿಂತ ಮರುಪಾವತಿ ಪ್ರಕ್ರಿಯೆಯೇ ದೊಡ್ಡ ಸವಾಲಾಗಿದ್ದು, ಕಡಿಮೆ ಠೇವಣಿಗಳ ನಡುವೆಯೂ ಬ್ಯಾಂಕ್ ಉತ್ತಮ ಸಾಧನೆ ಮಾಡಿರುವುದು ಗಮನಾರ್ಹ ಎಂದರು.
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಅಜಯಕುಮಾರ ಸರನಾಯಕ ರಜತ ಪರ್ವ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಇಲಕಲ್ ಚಿತ್ತರಗಿ ಸಂಸ್ಥಾನದ ಗುರುಮಹಾಂತ ಶ್ರೀಗಳು ಹಾಗೂ ಕಮತಗಿ ಹೊಳೆಹುಚ್ಚೇಶ್ವರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಲೋಕೇಶ್ವರ ಸಂಘದ ಅಧ್ಯಕ್ಷ ಶಿವಾನಂದ ಉದಪುಡಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪೂರ, ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಜಯ ಬರಗುಂಡಿ, ಉಪಾಧ್ಯಕ್ಷ ಉಮೇಶ ಹುನಗುಂದ, ನಿರ್ದೇಶಕರಾದ ಚಂದ್ರಶೇಖರ ಹರವಿ, ಮುಪ್ಪಣ್ಣ ಶೀಲವಂತ, ರಮೇಶ ಅಗಸಿಮನಿ, ಚಂದ್ರು ಪಟ್ಟಣಶೆಟ್ಟಿ, ಸಂಗಪ್ಪ ಹಡಪದ, ಸಿದ್ಲಿಂಗಪ್ಪ ಬರಗುಂಡಿ, ಅಶೋಕ ಬರಗುಂಡಿ, ಮುತ್ತು ಮೊರಬದ, ರಾಚಣ್ಣ ಕೆರೂರು, ನಾಗಪ್ಪ ಚಿಂದಿ, ಬಸವರಾಜ ಬಂಡಿವಡ್ಡರ, ಶರಣಬಸಪ್ಪ ಚಿಕ್ಕನರಗುಂದ, ಮ್ಯಾನೇಜರ ರಮೇಶ ಹಡಪದ, ಸಂಗಮೇಶ ಜೋಗುರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net