ತಾಲೂಕಿನ ಬರಪೀಡಿತ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ಖಾಜಿಬೂದಿಹಾಳ ಗ್ರಾಮದ ಹೊಲದಲ್ಲಿ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ ಕುಮಾರಸ್ವಾಮಿ ಮಾತನಾಡಿದರು. ಶಾಸಕ ಶರಣಗೌಡ ಪಾಟೀಲ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ ಕುಮಾರಸ್ವಾಮಿ ಆಗ್ರಹ
ಬರಪೀಡಿತ ರೈತರಿಗೆ ಒನ್‌ಟೈಮ್ ಪರಿಹಾರವಾಗಿ ಎಕರೆಗೆ 25 ಸಾವಿರ ರೂ. ನೀಡಬೇಕು.
ರೈತರ ಸಾಲ ಹಾಗೂ ಬಡ್ಡಿ ಮನ್ನಾ ಮಾಡಬೇಕು ಮತ್ತು ಸಾಲದ ಹೆಸರಿನಲ್ಲಿ ಆಸ್ತಿಗಳ ಜಪ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು.
ಗುಳೇದಗುಡ್ಡ : ಉತ್ತರ ಕರ್ನಾಟಕದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟ ನಿವಾರಣೆಗೆ ರಾಜ್ಯ ಸರ್ಕಾರ ತಕ್ಷಣ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ ಕುಮಾರಸ್ವಾಮಿ ಆಗ್ರಹಿಸಿದರು.
ತಾಲೂಕಿನ ಬರಪೀಡಿತ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ಖಾಜಿಬೂದಿಹಾಳ ಗ್ರಾಮದ ಹೊಲದಲ್ಲಿ ಮಾತನಾಡಿದ ಅವರು, ಬರಪೀಡಿತ ರೈತರಿಗೆ ಒನ್‌ಟೈಮ್ ಪರಿಹಾರವಾಗಿ ಎಕರೆಗೆ 25 ಸಾವಿರ ರೂ. ನೀಡಬೇಕು. ರೈತರ ಸಾಲ ಹಾಗೂ ಬಡ್ಡಿ ಮನ್ನಾ ಮಾಡಬೇಕು ಮತ್ತು ಸಾಲದ ಹೆಸರಿನಲ್ಲಿ ಆಸ್ತಿಗಳ ಜಪ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವ ಜೊತೆಗೆ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ಜೆಡಿಎಸ್ ರಾಜ್ಯದ ಎಲ್ಲ ಜಿಲ್ಲೆಗಳ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲಿದ್ದು, ಶಾಸಕರ ವರದಿಯನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯಪಾಲರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ನಿಖಿಲ ಕುಮಾರಸ್ವಾಮಿ, ಚುನಾವಣಾ ಭರವಸೆಗಳಾದ ಕಷ್ಣಾ ನೀರಾವರಿ ಯೋಜನೆ ಹಾಗೂ ರೈತರ ಅಭಿವದ್ಧಿ ಕಾರ್ಯಗಳು ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಆರೋಪಿಸಿದರು. ಸ್ಥಗಿತಗೊಂಡಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಶಾಸಕ ಶರಣಗೌಡ ಪಾಟೀಲ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಸಿ.ವಿ. ಚಂದ್ರಶೇಖರ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಎಂ. ಕಷ್ಣಾರೆಡ್ಡಿ ಸೇರಿ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.