ಬಾಗಲಕೋಟೆ : ಪಂಡಿತ್ ದೀನದಯಾಳ ಉಪಾಧ್ಯಾಯರ ಅಂತ್ಯೋದಯ ತತ್ವದ ಆಧಾರದ ಮೇಲೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಫಲ ತಲುಪಿಸುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಆಶಯ ವ್ಯಕ್ತಪಡಿಸಿದರು.
ಸಮೀಪದ ಮುಚಖಂಡಿಯಲ್ಲಿ ಭಾನುವಾರ ನಡೆದ ಬಿಜೆಪಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ನಗರ ಮತ್ತು ಗ್ರಾಮೀಣ ಮಂಡಲಗಳ ಎರಡು ದಿನಗಳ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪಕ್ಷದ ತತ್ವ ಸಿದ್ಧಾಂತಗಳು, ಸಂಘಟನೆಯ ಬಲವರ್ಧನೆ ಮತ್ತು ಕಾರ್ಯಕರ್ತರ ಜವಾಬ್ದಾರಿಗಳ ಬಗ್ಗೆ ತರಬೇತಿ ನೀಡಲು ಈ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿತ್ತು. ಕಾರ್ಯಕರ್ತರು ಪಕ್ಷದ ತತ್ವ ಹಾಗೂ ಸಂಘಟನಾ ಬಲ ಹೆಚ್ಚಿಸುವ ಮೂಲಕ ಪಕ್ಷದ ಸಿದ್ಧಾಂತಗಳು, ಅಂತ್ಯೋದಯ ಚಿಂತನೆ ಮತ್ತು ರಾಷ್ಟç ಪ್ರಥಮ ತತ್ವಗಳನ್ನು ಬೋಽಸುವುದು ಇದರ ಮುಖ್ಯ ಗುರಿಯಾಗಿದೆ ಎಂದರು.
ಪಕ್ಷದ ತತ್ವ, ಸಂಘಟನೆ ಮತ್ತು ರಾಷ್ಟçಸೇವೆಯ ಧ್ಯೇಯಗಳನ್ನು ಕಾರ್ಯಕರ್ತರು ಜನರಿಗೆ ತಲುಪಿಸುವ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು. ಸಂಘಟಿತ ಕಾರ್ಯ ಪದ್ಧತಿ ಮತ್ತು ಸಮರ್ಪಿತ ಸೇವಾಭಾವದಿಂದ ಮಾತ್ರ ಪಕ್ಷ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ ಎಂದು ತಿಳಿಸಿದರು.
ಪ್ರಶಿಕ್ಷಣ ವರ್ಗದ ಸಂಚಾಲಕ ಶಂಕರ ಹುನ್ನೂರ, ಭಾಗೀರಥಿ ಪಾಟೀಲ, ರಾಜು ನಾಯ್ಕರ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ಬಸವರಾಜ ಯಂಕಂಚಿ, ಸತ್ಯನಾರಾಯಣ ಹೆಮಾದ್ರಿ, ಶಶಿ ಗುತ್ತನ್ನವರ, ನಗರ ಮಂಡಲ ಅಧ್ಯಕ್ಷ ಬಸವರಾಜ ಕಟಗೇರಿ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ ಮತ್ತಿತರರು ಇದ್ದರು.