ದಿನನಿತ್ಯ ನೂರಾರು ವಿದ್ಯಾರ್ಥಿಗಳು, ರೈತರು ಹಾಗೂ ಕಾರ್ಮಿಕರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ರಸ್ತೆಯ ಈ ಅವ್ಯವಸ್ಥೆಯಿಂದ ಸಮಯ ವ್ಯರ್ಥವಾಗುತ್ತಿದ್ದು, ವಾಹನಗಳು ಪದೇಪದೇ ಹಾಳಾಗುತ್ತಿವೆ. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು, ರಸ್ತೆಯಲ್ಲಿ ನೀರು ನಿಲ್ಲದಂತೆ ಸೂಕ್ತ ಚರಂಡಿ ವ್ಯವಸ್ಥೆ ಮಾಡಬೇಕು. ರಸ್ತೆಯನ್ನು ಎತ್ತರಿಸಿ, ವೈಜ್ಞಾನಿಕವಾಗಿ ಡಾಂಬರೀಕರಣ ಮಾಡುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಒಂದು ವೇಳೆ ನಿರ್ಲಕ್ಷ್ಯ ಮುಂದುವರಿದರೆ, ರಸ್ತೆ ತಡೆದು ಉಗ್ರ ಹೋರಾಟ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಸಿದ್ದಾರೆ.