ಮುಖ್ಯವಾಗಿ ದಾಳಿ ಮಾಡಿದ ಸ್ಥಳಗಳಲ್ಲಿ ವಿವಿಧ ನಿಯಮಗಳು ಉಲ್ಲಂಘನೆ ಆಗಿರುವುದು ಕಂಡು ಬಂದಿದ್ದರಿಂದ ಅದಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ, ಕಂದಾಯ, ನೀರಾವರಿ, ಪರಿಸರ ಮಾಲಿನ್ಯ ನಿಯಂತ್ರಣ ಆರ್‌ಟಿಒ, ಪಿಡಬ್ಲ್ಯುಡಿ, ವಾಟರ್‌ಬೋರ್ಡ್, ಸರ್ವೇ, ಪೊಲೀಸ್, ಅರಣ್ಯ ಇಲಾಖೆಗಳ ನಿಯಮಗಳು ಉಲ್ಲಂಘನೆ ಬಗ್ಗೆ ಆಯಾ ಇಲಾಖೆಯವರು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಚೇರಿಗೆ ವರದಿ ಸಲ್ಲಿಸುವಂತೆ ತಿಳಿಸಿದ್ದು, ಆ ಬಗ್ಗೆ ಇಲಾಖೆ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ಮತ್ತು ನಿಯಮ ಉಲ್ಲಂಘನೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದರು.