ರಾಜ್ಯ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ

 ಬೀಳಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ತರಲುದ್ದೇಶಿಸಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದರು. ವಿ.ಪ. ಸದಸ್ಯ ಹನುಮಂತ ನಿರಾಣಿ, ಹೊಳಬಸು ಬಾಳಶೆಟ್ಟೆ, ಮಲ್ಲಿಕಾರ್ಜುನ ಅಂಗಡಿ ಇತರರಿದ್ದರು.
ಬೀಳಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ತರಲುದ್ದೇಶಿಸಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದರು. ವಿ.ಪ. ಸದಸ್ಯ ಹನುಮಂತ ನಿರಾಣಿ, ಹೊಳಬಸು ಬಾಳಶೆಟ್ಟೆ, ಮಲ್ಲಿಕಾರ್ಜುನ ಅಂಗಡಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿ.ಪ. ಸದಸ್ಯ ಹನುಮಂತ ನಿರಾಣಿ ಆಕ್ರೋಶ
  • ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ
  • ರಾಜ್ಯಪಾಲರಿಗೆ ಮನವಿ
ಬೀಳಗಿ: ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಆರೋಪಿಸಿ ಬೀಳಗಿ ತಾಲೂಕು ಬಿಜೆಪಿ ವತಿಯಿಂದ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಮೆರವಣಿಗೆ ಮೂಲಕ ಗ್ರೇಡ್-2 ತಹಸೀಲ್ದಾರ ಲಕ್ಷ್ಮೀಬಾಯಿ ಕರಿಮಣಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ವಿ.ಪ. ಸದಸ್ಯ ಹನುಮಂತ ಆರ್. ನಿರಾಣಿ ಮಾತನಾಡಿ, ರಾಜ್ಯದ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್‌ಗೆ ಕಾಳಜಿ ಇಲ್ಲ. ತಮ್ಮ ಮನಸ್ಸಿಗೆ ಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಸರ್ಕಾರ ತಪ್ಪು ದಾರಿಯಲ್ಲಿ ನಡೆದಾಗ ಅದನ್ನು ತಿದ್ದುವುದು ಮತ್ತು ಸಮಾಜದ ಮುಂದಿಡುವ ಕೆಲಸವನ್ನು ಪ್ರತಿಪಕ್ಷಗಳು ಮಾಡುತ್ತಾ ಬಂದಿವೆ. ಆದರೆ ಅದನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಇದು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19 (1) ಪರಿಚ್ಛೇದ (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರೃ ಉಲ್ಲಂಘನೆ ಆಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರೃವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಅಲ್ಲದೇ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ ಎಂದು ಟೀಕಿಸಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಹೊಳಬಸು ಬಾಳಶೆಟ್ಟಿ, ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಅಂಗಡಿ, ಎಂ.ಎಂ. ಶಂಭೋಜಿ, ಎಂ.ವೈ. ವಡವಾಣಿ, ಎಸ್.ಬಿ. ಬೂಸರಡ್ಡಿ, ಪ್ರಧಾನ ಕಾರ್ಯದರ್ಶಿ ಗಂಗಾಧರ ಬಿಂಗಿ, ಪಪಂ ಅಧ್ಯಕ್ಷ ಮುತ್ತು ಬೋರ್ಜಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಕಾವೇರಿ ರಾಠೋಡ, ದ್ರಾಕ್ಷಾಯಣಿ ಜಂಬಗಿ, ಮಲ್ಲಪ್ಪ ತೋಳಮಟ್ಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net