ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಎಣಿಕೆಗೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಬೆಳಗ್ಗೆ ೮ ಗಂಟೆಗೆ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರುಗಳು ಅಂದು ಬೆಳಗ್ಗೆ ೭ ಗಂಟೆಗೆ ಹಾಜರಿರಲು ತಿಳಿಸಲಾಗಿದೆ. ಭದ್ರತಾ ಕೊಠಡಿಯನ್ನು ಬೆಳಗ್ಗೆ ೭ ಗಂಟೆಗೆ ಚುನಾವಣಾ ವೀಕ್ಷಕರ, ಅಭ್ಯರ್ಥಿಗಳ, ಏಜೆಂಟರ ಸಮ್ಮುಖದಲ್ಲಿ ತೆರೆಯಲಾಗುತ್ತಿದೆ ಎಂದರು.