ಬಾಗಲಕೋಟೆ ಡಾ.ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾಽಕಾರಿ ಸಂಗಪ್ಪ, ಎಸ್ಪಿ ಸಿದ್ಧಾರ್ಥ ಗೋಯಲ್ ಇತರರು ಇದ್ದರು.
Published on:
Copied
Follow Us
ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಸ ಆಯಾಮ ನೀಡಿ, ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ತಮ್ಮ ಆಡಳಿತದ ಮೂಲಕ ಬಲ ತುಂಬಿದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಕೊಡುಗೆ ಸ್ಮರಣೀಯವಾದುದು ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಸಭಾಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಕಾಳಜಿ, ದೂರದೃಷ್ಠಿಯ ಆಡಳಿತ ಹಾಗೂ ಶೋಷಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಐತಿಹಾಸಿಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದರು.
ಸಮಾಜದ ದುರ್ಬಲ ವರ್ಗಗಳಿಗೆ ನ್ಯಾಯ ಒದಗಿಸಿದ ಽÃಮಂತ ನಾಯಕ. ಭೂ ಸುಧಾರಣೆ, ಸಾಮಾಜಿಕ ನ್ಯಾಯ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಂಬAಽಸಿದ ಅವರ ಹಲವು ನಿರ್ಧಾರಗಳು ರಾಜ್ಯದ ಸಾಮಾಜಿಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿವೆ. ಹಾವನೂರು ಆಯೋಗ ರಚನೆ ಸೇರಿದಂತೆ ಸಾಮಾಜಿಕ ನ್ಯಾಯದ ದಿಸೆಯಲ್ಲಿ ಅರಸು ಅವರು ಕೈಗೊಂಡ ಕ್ರಮಗಳು ಮುಂದಿನ ಪೀಳಿಗೆಗೆ ದಾರಿದೀಪವಾಗಿವೆ ಎಂದು ತಿಳಿಸಿದರು.
ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ ಮಾತನಾಡಿ, ಡಿ.ದೇವರಾಜ ಅರಸು ಅವರು ತಮ್ಮ ಆಡಳಿತದ ಅವಽಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ಪರಿವರ್ತನೆಗೆ ಮುನ್ನುಡಿ ಬರೆದಿದ್ದಾರೆ. ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ದೂರದೃಷ್ಟಿಯ ನಾಯಕರು, ಹಿಂದುಳಿದವರು, ಶೋಷಿತರು ಹಾಗೂ ದುರ್ಬಲ ವರ್ಗಗಳಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.
ಜಿಲ್ಲಾಽಕಾರಿ ಸಂಗಪ್ಪ ಮಾತನಾಡಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರು ನೀಡಿದ ಸಾಮಾಜಿಕ ನ್ಯಾಯದ ಸಂದೇಶ, ಸಂವಿಧಾನ ನೀಡಿದ ಸಮಾನತೆಯ ಆಶಯಗಳನ್ನು ಒಟ್ಟಾಗಿ ಮುನ್ನಡೆಸಿದಾಗ ಮಾತ್ರ ಸಮಗ್ರ ಹಾಗೂ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಇಂದಿನ ಯುವಜನತೆ ಅರಸು ಅವರ ಜೀವನ ಮತ್ತು ಸಾಧನೆಗಳನ್ನು ತಿಳಿದು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆದುಕೊಳ್ಳಬೇಕಿದೆ ಎಂದರು.
ಉಪನ್ಯಾಸ ನೀಡಿದ ಬಾಗಲಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಜಿ.ಜಿ.ಹಿರೇಮಠ, ಡಿ.ದೇವರಾಜ ಅರಸು ಅವರ ಜೀವನ ಚರಿತ್ರೆಯನ್ನು ವಿವರವಾಗಿ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಉಪ ವಿಭಾಗಾಽಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಪಂಕಜ ಜೋಶಿ, ಸಮಾ