ತಾಲೂಕಿನ ಯಲ್ಲಟ್ಟಿಯ ಕುಡಚಿ-ಜಮಖಂಡಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಶಾಲಾ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹಾಗೂ ಗದಗ ಶಿರುಂಜಿಯ ಬಸವ ಸಮರ್ಥ ಸಿದ್ಧೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವ ಆರ್.ಬಿ. ತಿಮ್ಮಾಪೂರ ಉದ್ಘಾಟಿಸಲಿದ್ದು, ಶಾಸಕ ಸಿದ್ದು ಸವದಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಪಿ.ಸಿ. ಗದ್ದಿಗೌಡರ, ಶಾಸಕರಾದ ಪ್ರಕಾಶ ಹುಕ್ಕೇರಿ, ಉಮಾಶ್ರೀ, ಸಿದ್ದು ಕೊಣ್ಣೂರ ಉಪಸ್ಥಿತಿಯಲ್ಲಿ ಎಂ.ಜಿ. ದಾಸರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಶಾಸಕರಾದ ಪಿ.ಎಚ್. ಪೂಜಾರ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪ್ರಾಧಿಕಾರ ಅಧ್ಯಕ್ಷ ದಾನಪ್ಪ ಹುಲಜತ್ತಿ, ಸಿ.ಎಂ. ನ್ಯಾಮಗೌಡ, ಬಿ.ಕೆ. ಕೊಣ್ಣೂರ ಆಗಮಿಸಲಿದ್ದಾರೆ ಎಂದರು.