ಜಿಲ್ಲೆಯಲ್ಲಿ 07 ಮತಕ್ಷೇತ್ರಗಳನ್ನು ಒಳಗೊಂಡಂತೆ ಒಟ್ಟು 1785 ಮತಗಟ್ಟೆಗಳಿದ್ದು, ಈ ಎಲ್ಲ ಮತಗಟ್ಟೆಗಳಿಗೆ ಮತಗಟ್ಟೆ ಮಟ್ಟದ ಅಽಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಪ್ರತಿ 10ರಿಂದ 12 ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲೆ ಒಬ್ಬ ಸೂಪರ್ ವೈಸರನ್ನು ನೇಮಕ ಮಾಡಲಾಗಿದೆ . ಪರಿಷ್ಕರಣೆ ಪ್ರಕ್ರಿಯೆ, ನಮೂನೆಗಳು ಮತ್ತು ವೇಳಾ ಪಟ್ಟಿಯ ಕುರಿತು ಹೆಚ್ಚಿನ ವಿವರಗಳನ್ನು ಜಿಲ್ಲಾ ಚುನಾವಣಾಧಿಕಾರಿ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮತ್ತು ಭಾರತ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಚಾರ ಪಡಿಸಲಾಗುವುದು ಎಂದು ಹೇಳಿದರು.