ಧಾರಾಕಾರ ಮಳೆಗೆ ಮನೆಗಳಿಗೆ ನುಗ್ಗಿದ ನೀರು

ಇಳಕಲ್ಲ ನಗರದಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಯಿಂದಾಗಿ ಜಲಾವೃತಗೊಂಡಿರುವ ರಸ್ತೆ.
ಇಳಕಲ್ಲ ನಗರದಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಯಿಂದಾಗಿ ಜಲಾವೃತಗೊಂಡಿರುವ ರಸ್ತೆ.
Published on

ಪ್ರಮುಖ ಮುಖ್ಯಾಂಶಗಳು

  • ಜನಜೀವನ ಸಂಪೂರ್ಣ ಅಸ್ತವ್ಯಸ್ತ
  • ಸಾರ್ವಜನಿಕರ ಆಕ್ರೋಶ
ಇಳಕಲ್ಲ: ನಗರದಲ್ಲಿ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರದ ರಸ್ತೆಗಳು ಜಲಾವೃತಗೊಂಡಿದ್ದು, ಸಾರ್ವಜನಿಕರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಒಳಚರಂಡಿ ಹಾಗೂ ರಾಜಕಾಲುವೆಗಳು ಕಸ-ಕಡ್ಡಿಗಳಿಂದ ತುಂಬಿ ಹೋಗಿರುವುದರಿಂದ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಾಗವಿಲ್ಲದೆ ರಸ್ತೆಗಳ ಮೇಲೆ ನದಿಯಂತೆ ಹರಿಯುತ್ತಿದೆ. ತುಂಬಿ ತುಳುಕುತ್ತಿರುವ ಚರಂಡಿಗಳ ಕಲುಷಿತ ನೀರು ರಸ್ತೆಯುದ್ದಕ್ಕೂ ಹರಡಿತು. ನಗರಸಭೆ ಕಾರ್ಯಾಲಯ ಹಾಗೂ ವ್ಯಾಪಾರ ಮಳಿಗೆಗಳಿಗೆ ನುಗ್ಗಿದ ನೀರು ನಗರದ ಸ್ವಚ್ಛತೆ ಮತ್ತು ಮೂಲಸೌಕರ್ಯಗಳನ್ನು ನೋಡಿಕೊಳ್ಳಬೇಕಾದ ನಗರಸಭೆ ಕಾರ್ಯಾಲಯದ ಆವರಣಕ್ಕೆ ಮಳೆ ನೀರು ನುಗ್ಗಿದ್ದು, ಅಽಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ ಸ್ವಚ್ಚಗೊಳಿಸಲು ಹರಸಾಹಸ ಪಟ್ಟರು.
ಇಲ್ಲಿನ ಸಾಯಿಬಾಬಾ ಮಂದಿರ ಹತ್ತಿರ ತೆಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಧಾನ್ಯಗಳು, ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಒದ್ದೆಯಾಗಿವೆ. ಸಣ್ಣ ಮಕ್ಕಳು ಹಾಗೂ ವೃದ್ಧರನ್ನು ಕರೆದುಕೊಂಡು ನಿವಾಸಿಗಳು ಇಡೀ ರಾತ್ರಿ ನೀರು ಹೊರಹಾಕುತ್ತಾ ಜಾಗರಣೆ ಮಾಡಿದ್ದಾರೆ.

ಸಾರ್ವಜನಿಕರ ಆಕ್ರೋಶ

ಪ್ರಜಾಗ್ರತೆಯಾಗಿ ಚರಂಡಿಗಳನ್ನು ಸ್ವಚ್ಛಗೊಳಿಸದ ಕಾರಣವೇತಿ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ಎದುರಾಗುತ್ತದೆ. ನಗರಸಭೆ ಮುಂ ಇಂದು ಈ ಅವಾಂತರ ಸೃಷ್ಟಿಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net