ರಬಕವಿ/ಬನಹಟ್ಟಿ: ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಹಿಪ್ಪರಗಿ ಬ್ಯಾರೇಜ್‌ಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಶನಿವಾರ ಒಂದೇ ದಿನದಲ್ಲಿ ಜಲಾಶಯದ ನೀರಿನ ಮಟ್ಟ ಶೇ.35ರಷ್ಟು ಹೆಚ್ಚಳ ಕಂಡಿದ್ದು, ಬ್ಯಾರೇಜ್ ಮತ್ತೆ ಮೈದುಂಬಿ ನಿಂತಿದೆ.