2018ರಲ್ಲಿ ಜಿಲ್ಲೆಯಲ್ಲಿ ಕಬ್ಬಿನ ಹೋರಾಟ ತೀವ್ರಗೊಂಡಿತ್ತು. ಭರ್ತಿ ಒಂದು ತಿಂಗಳು ಪ್ರತಿಭಟನೆಗಳು ನಡೆದಿದ್ದವು. ಕೊನೆಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿತ್ತು. ಈ ರೀತಿ ಆಸ್ತಿ-ಪಾಸ್ತಿಗೆ ದೊಡ್ಡಮಟ್ಟದ ಹಾನಿ ಆಗಿರಲಿಲ್ಲ. ಈ ಸಲವೂ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ, ಜಿಲ್ಲಾಧಿಕಾರಿ ಸಂಗಪ್ಪ, ಎಸ್ಪಿ ಸಿದ್ಧಾರ್ಥ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಪಂ ಸಿಇಒ ಶಶಿಧರ ಕುರೇರ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಸಂಧಾನಕ್ಕೆ ನಡೆದಿದ್ದ ಪ್ರಯತ್ನ ಮಾತ್ರ ಫಲ ನೀಡಿರಲಿಲ್ಲ.