ದೈಹಿಕ ಆರೋಗ್ಯಕ್ಕೆ ಯೋಗ ಪರಿಣಾಮಕಾರಿ ಸಾಧನ

ಅಂತಾರಾಷ್ಟಿçÃಯ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಶನಿವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಜಾಗೃತಿ ನಡಿಗೆಗೆ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಚಾಲನೆ ನೀಡಿದರು.
ಅಂತಾರಾಷ್ಟಿçÃಯ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಶನಿವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಜಾಗೃತಿ ನಡಿಗೆಗೆ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಚಾಲನೆ ನೀಡಿದರು.
Published on
ಬಾಗಲಕೋಟೆ: ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಯೋಗವು ಪರಿಣಾಮಕಾರಿ ಸಾಧನವಾಗಿದೆ ಎಂದು ಅಪರ ಜಿಲ್ಲಾಽಕಾರಿ ಅಶೋಕ ತೇಲಿ ತಿಳಿಸಿದರು.
ಅಂತಾರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ನಡಿಗೆಗೆ ಚಾಲನೆ ನೀಡಿ ಮಾತನಾಡಿದರು.
ಅಂತಾರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಯೋಗದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಯೋಗ ನಡಿಗೆ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದರು.
ಪ್ರತಿ ವರ್ಷ ಜೂನ್ ೨೧ ರಂದು ಆಚರಿಸಲ್ಪಡುವ ಅಂತಾರಾಷ್ಟಿçÃಯ ಯೋಗ ದಿನಾಚರಣೆಯು ಯೋಗದ ಬಗ್ಗೆ ಜಾಗತಿಕ ಮಟ್ಟದಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಿದೆ. ಈ ವರ್ಷದ ಆಚರಣೆಯಲ್ಲಿ ಅಽಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತರಬೇಕೆಂದು ತಿಳಿಸಿದರು.
ನಂತರ ಜಾಗೃತಿ ನಡಿಗೆ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭವಾಗಿ ನವನಗರ ಬಸ್ ನಿಲ್ದಾಣ, ಪೊಲೀಸ್ ಪ್ಯಾಲೇಸ್ ಮಾರ್ಗವಾಗಿ ಎಲ್‌ಐಸಿ ವೃತ್ತದ ಬಳಿ ಇರುವ ಜಿಲ್ಲಾ ಆಯುರ್ವೇದ ಆಸ್ಪತ್ರೆಗೆ ಮುಕ್ತಾಯಗೊಂಡಿತು.
ಜಿಲ್ಲಾಽಕಾರಿಗಳ ಕಾನೂನು ಸಲಹೆಗಾರ ನ್ಯಾ.ಡಿ.ವೈ.ಬಸಾಪೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಮಂಜುನಾಥ ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಽಕಾರಿ ಅಲ್ಲಮಪ್ರಭು, ಜಿಲ್ಲಾ ಆಯುಷ್ ಅಽಕಾರಿ ಎಸ್.ಜಿ.ಮಠ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net